Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಪಾಕಿಸ್ತಾನದ ವಿರುದ್ಧ ಸೇನಾಕಾರ್ಯಾಚರಣೆ ಮೋದಿ ಬಯಕೆ: ಸುಬ್ರಹ್ಮಣ್ಯಂ ಸ್ವಾಮಿ

ಪಾಕಿಸ್ತಾನದ ವಿರುದ್ಧ ಸೇನಾಕಾರ್ಯಾಚರಣೆ ಮೋದಿ ಬಯಕೆ: ಸುಬ್ರಹ್ಮಣ್ಯಂ ಸ್ವಾಮಿ
ನವದೆಹಲಿ , ಗುರುವಾರ, 22 ಸೆಪ್ಟಂಬರ್ 2016 (15:25 IST)
ಪ್ರಧಾನಿ ನರೇಂದ್ರ ಮೋದಿಯವರು ತೆಗೆದುಕೊಂಡ ನಿರ್ಧಾರದಿಂದ ಪಾಕಿಸ್ತಾನ ತುಂಬಾ ಸಂಕಷ್ಟ ಅನುಭವಿಸುವುದು ಖಚಿತ ಎಂದು ಬಿಜೆಪಿ ಮುಖಂಡ ಸುಬ್ರಹ್ಮಣ್ಯಂ ಸ್ವಾಮಿ ಹೇಳಿದ್ದಾರೆ.
 
ಬಿಜೆಪಿಯ ಮತ್ತೊಬ್ಬ ಮುಖಂಡ ಸಿದ್ಧಾರ್ಥ ನಾಥ್ ಸಿಂಗ್ ಮಾತನಾಡಿ, ಪ್ರಧಾನಮಂತ್ರಿ ನರೇಂದ್ರ ಮೋದಿ ಸರಕಾರ ಪಾಕಿಸ್ತಾನದ ವಿರುದ್ಧ ಸೇನಾ ಕಾರ್ಯಾಚರಣೆ ನಡೆಸುವ ಆಯ್ಕೆ ಮಾಡುವ ಸಾಧ್ಯತೆಗಳಿವೆ ಎಂದು ತಿಳಿಸಿದ್ದಾರೆ. 
 
ಪ್ರಧಾನಮಂತ್ರಿ ಮೋದಿ ಮತ್ತು ರಕ್ಷಣಾ ಸಚಿವರ ಹೇಳಿಕೆ ಗಮನಿಸಿದಲ್ಲಿ ಸೇನಾ ಕಾರ್ಯಾಚರಣೆ ನಡೆಯುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದು ಹೇಳಿದ್ದಾರೆ. 
 
ಏತನ್ಮಧ್ಯೆ, ಉರಿ ಸೇನಾ ಕೇಂದ್ರದ ಮೇಲೆ ನಡೆದ ಉಗ್ರರ ದಾಳಿಯ ಸೇಡು ತೀರಿಸಿಕೊಳ್ಳುತ್ತೇವೆ ಎನ್ನುವ ಪ್ರಧಾನಿ ಹೇಳಿಕೆ ಹುಸಿಯಾಗಲು ಬಿಡುವುದಿಲ್ಲ ಎಂದು ಕೇಂದ್ರ ರಕ್ಷಣಾ ಖಾತೆ ಸಚಿವ ಮನೋಹರ್ ಪರಿಕ್ಕರ್ ತಿಳಿಸಿದ್ದಾರೆ.
 
ಉತ್ತರ ಕಾಶ್ಮಿರದ ಉರಿ ಸೇನಾ ಕೇಂದ್ರದ ಮೇಲೆ ಉಗ್ರರು ದಾಳಿ ನಡೆಸಿ 18 ಸೈನಿಕರನ್ನು ಕೊಂದ ಹಿನ್ನೆಲೆಯಲ್ಲಿ ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ರಿಕ್ತ ವಾತಾವರಣ ಉಂಟಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

Share this Story:

Follow Webdunia kannada

ಮುಂದಿನ ಸುದ್ದಿ

ಗುಂಡಿನ ದಾಳಿಗೊಳಗಾಗಿದ್ದ ಆರ್‌ಎಸ್ಎಸ್ ನಾಯಕ ವಿಧಿ ವಶ