Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಮಹಾತ್ಮಾ ಗಾಂಧಿ ಹತ್ಯೆಯಲ್ಲಿ ಆರೆಸ್ಸೆಸ್ ಕೈವಾಡವಿದೆ ಎಂದು ನಾನು ಹೇಳಿಯೇ ಇಲ್ಲ: ರಾಹುಲ್ ಗಾಂಧಿ ಯೂ-ಟರ್ನ್

ಮಹಾತ್ಮಾ ಗಾಂಧಿ ಹತ್ಯೆಯಲ್ಲಿ ಆರೆಸ್ಸೆಸ್ ಕೈವಾಡವಿದೆ ಎಂದು ನಾನು ಹೇಳಿಯೇ ಇಲ್ಲ: ರಾಹುಲ್ ಗಾಂಧಿ ಯೂ-ಟರ್ನ್
ನವದೆಹಲಿ , ಬುಧವಾರ, 24 ಆಗಸ್ಟ್ 2016 (17:49 IST)
ರಾಷ್ಟ್ರಪಿತ ಮಹಾತ್ಮಾ ಗಾಂಧಿ ಹತ್ಯೆಯಲ್ಲಿ ಆರೆಸ್ಸೆಸ್ ಕೈವಾಡವಿದೆ ಎಂದು ನಾನವು ಹೇಳಿಯೇ ಇಲ್ಲ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಯೂ-ಟರ್ನ್ ಹೊಡೆದಿದ್ದಾರೆ. 
 
ರಾಹುಲ್ ಗಾಂಧಿ ಪರ ವಾದ ಮಂಡಿಸಿದ ಖ್ಯಾತ ವಕೀಲ ಕಪಿಲ್ ಸಿಬಲ್, ತಮ್ಮ ಕಕ್ಷಿದಾರ ಯಾವತ್ತೂ ಮಹಾತ್ಮಾ ಗಾಂಧಿ ಹತ್ಯೆಯಲ್ಲಿ ಆರೆಸ್ಸೆಸ್ ಕೈವಾಡಿವಿದೆ ಎಂದು ಹೇಳಿಲ್ಲ. ಆದರೆ, ಆರೆಸ್ಸೆಸ್‌ಗೆ ಸಂಬಂಧಿಸಿದ ವ್ಯಕ್ತಿಗಳು ಗಾಂಧಿಯವರ ಹತ್ಯೆ ಮಾಡಿದ್ದಾರೆ ಎಂದು ಹೇಳಿದ್ದಾರೆ. ಆರೆಸ್ಸೆಸ್ ಅಪರಾಧಿಗಳ ತಾಣವಾಗಿದೆ ಎಂದು ಎಂದೆಂದಿಗೂ ಹೇಳಿಲ್ಲ ಎಂದು ವಾದ ಮಂಡಿಸಿದ್ದಾರೆ.
 
ಆರೆಸ್ಸೆಸ್ ಕಾರ್ಯಕರ್ತ ದಾಖಲಿಸಿದ ಮಾನನಷ್ಟ ಮೊಕದ್ದಮೆಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ದೀಪಕ್ ಮಿಶ್ರಾ ಮತ್ತು ನ್ಯಾಯಮೂರ್ತಿ ಆರ್‌.ಎಫ್ ನಾರಿಮಣಿ ನೇತೃತ್ವದ ನ್ಯಾಯಪೀಠದ ಮುಂದೆ ಸಿಬಲ್ ತಮ್ಮ ಕಕ್ಷಿದಾರರ ಪರ ವಾದಿಸಿದ್ದಾರೆ. 
 
ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿ ಮಹಾತ್ಮಾ ಗಾಂಧಿ ಹತ್ಯೆಯಲ್ಲಿ ಆರೆಸ್ಸೆಸ್ ಸಂಸ್ಥೆಯನ್ನು ಹೊಣೆಯಾಗಿಸಿಲ್ಲ ಎಂದು ಕೋರ್ಟ್‌ಗೆ ಅಫಿಡವಿಟ್ ಸಲ್ಲಿಸಿದ ಹಿನ್ನೆಲೆಯಲ್ಲಿ ಪ್ರಕರಣವನ್ನು ವಜಾಗೊಳಿಸುವುದು ಸೂಕ್ತ ಎಂದು ಅಭಿಪ್ರಾಯಪಟ್ಟಿತ್ತು.  
 
ಏತನ್ಮಧ್ಯೆ, ಆರೆಸ್ಸೆಸ್ ಕಾರ್ಯಕರ್ತನ ಪರ ವಕೀಲ ಉಮೇಶ್ ಲಲಿತ್‌ ಅವರು ನ್ಯಾಯಾಲಯದಲ್ಲಿ ವಾದ ಮಂಡಿಸಿ, ತಮ್ಮ ಕಕ್ಷಿದಾರರಿಂದ ಕೆಲ ಮಾಹಿತಿಗಳು ಪಡೆಯುವುದು ಅಗತ್ಯವಾಗಿದ್ದರಿಂದ ಸಮಯ ನೀಡುವಂತೆ ನ್ಯಾಯಾಲಯಕ್ಕೆ ಕೋರಿದ್ದರಿಂದ ಸೆಪ್ಟೆಂಬರ್ 1 ರ ವರೆಗೆ ನ್ಯಾಯಮೂರ್ತಿಗಳು ವಿಚಾರಣೆಯನ್ನು ಮುಂದೂಡಿದ್ದಾರೆ. 
 
ಇದಕ್ಕಿಂತ ಮೊದಲು ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿ, ತಮ್ಮ ವಿರುದ್ಧದ ಮಾನನಷ್ಟ ಮೊಕದ್ದಮೆಯನ್ನು ರದ್ದುಗೊಳಿಸುವಂತೆ ಕೋರಿ ಕೋರ್ಟ್‌ಗೆ ಮನವಿ ಸಲ್ಲಿಸಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ 

Share this Story:

Follow Webdunia kannada

ಮುಂದಿನ ಸುದ್ದಿ

ಒಂದು ಕೆಜಿ ಈರುಳ್ಳಿಗೆ 5 ಪೈಸೆ?