ಆಮ್ ಆದ್ಮಿ ಪಕ್ಷದ ಸಂಚಾಲಕ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ಗೆ ಹತ್ಯೆ ಮಾಡುವುದಾಗಿ ಜೀವ ಬೆದರಿಕೆಯೊಡ್ಡಿದ ಘಟನೆ ಬಹಿರಂಗವಾಗಿದೆ.
ಪೊಲೀಸ್ ಕೇಂದ್ರ ಕಚೇರಿಗೆ ಕರೆ ಮಾಡಿದ ವ್ಯಕ್ತಿಯೊಬ್ಬ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್‌ರನ್ನು ಹತ್ಯೆ ಮಾಡುವುದಾಗಿ ಬೆದರಿಕೆಯೊಡ್ಡಿದ್ದಾನೆ. ಇದರಿಂದ ಕಂಗಾಲಾದ ಪೊಲೀಸರು ವ್ಯಕ್ತಿಯ ಕರೆಯನ್ನು ಪರಿಶೀಲಿಸಿದಾಗ ಮಾಳ್ವಿಯಾ ಪೊಲೀಸ್ ಠಾಣೆಯ ಪೇದೆ ಕರೆ ಮಾಡಿರುವುದು ಪತ್ತೆಯಾದ ನಂತರ ಆತನನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಕೇಜ್ರಿವಾಲ್ ಜನಪ್ರಿಯತೆಯನ್ನು ಸಹಿಸದ ಕಿಡಿಗೇಡಿಗಳು ಇಂತಹ ಹೀನ ಕೃತ್ಯಕ್ಕೆ ಮುಂದಾಗಿದ್ದಾರೆ ಎಂದು ಉಪಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹತ್ಯೆ ಬೆದರಿಕೆಗೆ ಪ್ರತಿಕ್ರಿಯೆ ನೀಡಿದ ಆಮ್ ಆದ್ಮಿ ಪಕ್ಷದ ಮುಖಂಡರು, ಇಂತಹ ಗೊಡ್ಡು ಬೆದರಿಕೆಗಳಿಗೆ ಮಣಿಯುವುದಿಲ್ಲ. ನಮ್ಮ ಸರಕಾರ ಜನಪರ ಕಾರ್ಯಕ್ರಮಗಳನ್ನು ಮುಂದುವರಿಸಿಕೊಂಡು ಹೋಗಲಿದೆ ಎಂದು ತಿರುಗೇಟು ನೀಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.