ನವದೆಹಲಿ : ನಿರ್ಭಯಾ ಅತ್ಯಾಚಾರ ಪ್ರಕರಣದ ಆರೋಪಿಗಳನ್ನು ದೆಹಲಿ ಸರ್ಕಾರ ರಕ್ಷಿಸುವ ಪ್ರಯತ್ನ ಮಾಡುತ್ತಿದೆ ಎಂದು ಬಿಜೆಪಿ ಆರೋಪಿಸಿದೆ.
ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ದೆಹಲಿ ಬಿಜೆಪಿ ರಾಜ್ಯಾಧ್ಯಕ್ಷ ಮನೋಜ್ ತಿವಾರಿ , ಪ್ರಕರಣದಲ್ಲಿ ಗಲ್ಲುಶಿಕ್ಷೆಗೆ ಗುರಿಯಾದ ದೋಷಿಗಳನ್ನು ರಕ್ಷಿಸಲು ಸಿಎಂ ಅರವಿಂದ್ ಕ್ರೇಜಿವಾಲ್ ನೇತೃತ್ವದ ದೆಹಲಿ ಸರ್ಕಾರ ಪ್ರಯತ್ನಿಸುತ್ತಿದೆ. ನ್ಯಾಯಾಲಯದ ತೀರ್ಪಿನ ಪ್ರಕ್ರಿಯೆಗೆ ಅಡ್ಡಿಪಡಿಸುವ ಮೂಲಕ ಆಪ್ ಹೀಗೆ ಮಾಡುತ್ತಿದೆ ಎಂದು ಹೇಳಿದ್ದಾರೆ.
ಅಲ್ಲದೇ ಅತ್ಯಾಚಾರಿಗಳಿಗೆ ಶಿಕ್ಷೆ ನೀಡದಂತೆ ತಡೆಯಲು ಆಪ್ ಸರ್ಕಾರ ಉದ್ದೇಶಪೂರ್ವಕವಾಗಿ 2 ವರ್ಷಗಳಿಂದ ಪ್ರಯತ್ನಿಸುತ್ತಿದೆ. 2 ವರ್ಷಗಳ ಹಿಂದೆಯೇ ಪ್ರಕರಣ ಸಂಬಂಧ ಕೋರ್ಟ್ ಗೆ ನೀಡಬೇಕಾಗಿದ್ದ ಮಾಹಿತಿಯನ್ನು 2019ರಲ್ಲಿ ನೀಡಿದೆ ಎಂದು ಅವರು ಆರೋಪಿಸಿದ್ದಾರೆ.