ನವದೆಹಲಿ: ಏಳು ವರ್ಷದ ಮಗುವಿನ ಮೇಲೆ ಅತ್ಯಾಚಾರವೆಸಗಿದ ಕಾಮುಕನನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.
20 ವರ್ಷದ ಯುವಕ ಮನೆಯ ಹೊರಗೆ ಆಟವಾಡಿಕೊಂಡಿದ್ದ ಏಳು ವರ್ಷದ ಬಾಲಕಿಯನ್ನು ಆಮಿಷ ತೋರಿಸಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರವೆಸಗಿದ್ದಾನೆ.
ಆರೋಪಿ ಮಗುವನ್ನು ಕರೆದುಕೊಂಡು ಹೋಗುತ್ತಿರುವ ದೃಶ್ಯಗಳು ಸ್ಥಳೀಯ ಸಿಸಿಟಿವಿ ಕ್ಯಾಮರಾಗಳಲ್ಲಿ ಸೆರೆಯಾಗಿತ್ತು. ಹೀಗಾಗಿ ಪೊಲೀಸರು ಸುಲಭವಾಗಿ ಆರೋಪಿಯನ್ನು ಬಂಧಿಸಿದ್ದಾರೆ. ಇನ್ನು, ಈತ ಈ ಮೊದಲು ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾಗಿದ್ದ ಎಂದು ತಿಳಿದುಬಂದಿದೆ.