Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಲಕ್ನೋ : 70 ವರ್ಷ ವಯಸ್ಸಿನ ಬುದ್ಧಿಮಾಂದ್ಯ ವೃದ್ಧೆ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಉತ್ತರ ಪ್ರದೇಶದ ಮಿರ್ಜಾಪುರ ಗ್ರಾಮದಲ್ಲಿ ನಡೆದಿದೆ.
ಅತ್ಯಾಚಾರ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯು ವೃದ್ಧೆಯನ್ನು ಅಪಹರಿಸಿ ಯಾರೂ ಇಲ್ಲದ ಸ್ಥಳಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ಗ್ರಾಮೀಣ) ಸಂಜೀವ್ ಬಾಜ್ಪೇಯ್ ತಿಳಿಸಿದ್ದಾರೆ.
ವೃದ್ಧೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದರು. ರಕ್ತಸ್ರಾವದಿಂದ ಬಳಲುತ್ತಿದ್ದ ಬುದ್ಧಿಮಾಂದ್ಯ ವೃದ್ಧೆಯನ್ನು ಆಕೆಯ ಕುಟುಂಬಸ್ಥರು ಜಮೀನೊಂದರಲ್ಲಿ ಪತ್ತೆಹಚ್ಚಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.