ಅಮಿತ್ ಶಾ ವಿರುದ್ಧ ಅವಹೇಳನಕಾರಿ ಹೇಳಿಕೆ ಪ್ರಕರಣ: ರಾಹುಲ್ ಗಾಂಧಿಗೆ ಬಿಗ್ ರಿಲೀಫ್‌

Sampriya
ಬುಧವಾರ, 6 ಆಗಸ್ಟ್ 2025 (17:27 IST)
Photo Credit X
ಚೈಬಾಸಾ: 2018ರ ರ್ಯಾಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಹಿರಿಯ ನಾಯಕ ರಾಹುಲ್ ಗಾಂಧಿ ಅವರಿಗೆ ಜಾರ್ಖಂಡ್‌ನ ಚೈಬಾಸಾದ ಸಂಸದ-ಶಾಸಕ ನ್ಯಾಯಾಲಯವು ಬುಧವಾರ ಜಾಮೀನು ನೀಡಿದೆ.

ಬೆಳಗ್ಗೆ 10.55ರ ಸುಮಾರಿಗೆ ರಾಹುಲ್ ಗಾಂಧಿ ನ್ಯಾಯಾಲಯದ ಮುಂದೆ ಹಾಜರಾದರು.

ಜಾರ್ಖಂಡ್ ಹೈಕೋರ್ಟ್ ನಿರ್ದೇಶನದಂತೆ ರಾಹುಲ್ ಗಾಂಧಿ ಅವರು ನ್ಯಾಯಾಲಯಕ್ಕೆ ಹಾಜರಾಗಿದ್ದರು. ಅವರು ಜಾಮೀನು
ಕೋರಿದ್ದರು. ಷರತ್ತುಬದ್ಧ ಜಾಮೀನು ನೀಡಲಾಗಿದೆ. ನಾವು ಈಗ ಪ್ರಕ್ರಿಯೆಯನ್ನು ಮುಂದುವರಿಸುತ್ತೇವೆ ಎಂದು ಗಾಂಧಿ ಪರ ವಕೀಲ ಪ್ರಣವ್ ದರಿಪಾ ಹೇಳಿದರು.

ಮಾನನಷ್ಟಕ್ಕೆ ಸಂಬಂಧಿಸಿದ ಪ್ರಕರಣವನ್ನು 2018ರಲ್ಲಿ ದಾಖಲಿಸಲಾಗಿದೆ ಎಂದು ವಕೀಲರು ಹೇಳಿದರು.

ಪ್ರಕರಣವನ್ನು ಆರಂಭದಲ್ಲಿ ರಾಂಚಿಯಲ್ಲಿ ದಾಖಲಿಸಲಾಗಿತ್ತು ಮತ್ತು 2021 ರಲ್ಲಿ ಚೈಬಾಸಾಗೆ ವರ್ಗಾಯಿಸಲಾಯಿತು. ನಾವು ಹೈಕೋರ್ಟ್‌ಗೆ ವೈಯಕ್ತಿಕ ಹಾಜರಾತಿಯಿಂದ ವಿನಾಯಿತಿಗಾಗಿ ಅರ್ಜಿ ಸಲ್ಲಿಸಿದ್ದೇವೆ ಮತ್ತು ಹೈಕೋರ್ಟ್ ನಿರ್ದೇಶನದ ಪ್ರಕಾರ ನಾವು ಇಲ್ಲಿದ್ದೇವೆ ಎಂದು ಅವರು ಹೇಳಿದರು.

ಮತ್ತೊಬ್ಬ ಹೈಕೋರ್ಟ್ ವಕೀಲ ಧೀರಜ್ ಕುಮಾರ್, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಷರತ್ತುಬದ್ಧ ಜಾಮೀನು ನೀಡಲಾಗಿದೆ. ಚೈಬಾಸಾ ಸಂಸದ-ಶಾಸಕ ಸುಪ್ರಿಯಾ ರಾಣಿ ತಿಗ್ಗಾ ಅವರ ವಿಶೇಷ ನ್ಯಾಯಾಲಯವು ವಿಚಾರಣೆಗೆ ಸಹಕರಿಸುವಂತೆ ಗಾಂಧಿಗೆ ಕೇಳಿದೆ ಎಂದು ಹೇಳಿದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಹೇಶ್ ಶೆಟ್ಟಿ ದಕ ಜಿಲ್ಲೆಯಿಂದ ಗಡಿಪಾರು ಆದೇಶದಲ್ಲಿ ಮಹತ್ವದ ಬೆಳವಣಿಗೆ

ಯುಪಿಎ ಸರ್ಕಾರ ಮುಂಬೈ ದಾಳಿ ಬಳಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಬೇಕೆಂದಿತ್ತು, ಅಮೆರಿಕಾ ಬೇಡ ಎಂದಿತು: ಪಿ ಚಿದಂಬರಂ

ಜಾತಿಗಣತಿ ನೆಪ ಮಾತ್ರ ಹಿಂದೂಗಳನ್ನು ಒಡೆಯುವುದೇ ಕೆಲಸ: ಬಿವೈ ವಿಜಯೇಂದ್ರ

ಪಾಪ ಖರ್ಗೆ ಕುಟುಂಬಕ್ಕೆ ಸರ್ಕಾರ ಮೊದಲು ಪರಿಹಾರ ಕೊಡಲಿ: ಬಿವೈ ವಿಜಯೇಂದ್ರ

ಉಪವಾಸ ಮುಗಿದ ತಕ್ಷಣ ಏನನ್ನು ಸೇವಿಸಬೇಕು ಮತ್ತು ಸೇವಿಸಬಾರದು

ಮುಂದಿನ ಸುದ್ದಿ
Show comments