ಇತ್ತೀಚೆಗೆ ನಡೆದ ಪಂಚರಾಜ್ಯಗಳ ಚುನಾವಣೆ ಸೋಲಿನ ಹಿನ್ನೆಲೆಯಲ್ಲಿ ಯುವಕರಿಗೆ ಅಧಿಕಾರ ಹಸ್ತಾಂತರಿಸಿದಲ್ಲಿ ಪಕ್ಷ ಚೇತರಿಕೆ ಕಾಣಲು ಸಾಧ್ಯ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ದಿಗ್ವಿಜಯ್ ಸಿಂಗ್ ಹೇಳಿದ್ದಾರೆ.
ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿ ಪಕ್ಷದ ಅಧ್ಯಕ್ಷರಾಗುವ ಮುನ್ನವೇ, ಯುವಕರಿಗೆ ಅಧಿಕಾರ ಹಸ್ತಾಂತರಿಸುವಂತೆ ನೀಡಿರುವ ಹೇಳಿಕೆ ಕಾಂಗ್ರೆಸ್ ವಲಯದಲ್ಲಿ ಕೋಲಾಹಲ ಸೃಷ್ಟಿಸಿದೆ.
ನಮಗೆ ಬೇರೆ ದಾರಿಯಿಲ್ಲ. ಯುವಕರಿಗೆ ಅಧಿಕಾರ ಹಸ್ತಾಂತರಿಸುವ ಒಂದೇ ಆಯ್ಕೆಯಿದೆ. ನಾನು ಮೇಜರ್ ಸರ್ಜರಿ ಬಗ್ಗೆ ಹೇಳಿಕೆ ನೀಡಿದಾಗ ಕೆಲವು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಪಕ್ಷದ ಹಿತಕ್ಕಾಗಿ ಯುವಕರಿಗೆ ಅಧಿಕಾರ ನೀಡುವುದು ಅನಿವಾರ್ಯವಾಗಿದೆ ಎಂದಿದ್ದಾರೆ.
ವಂದೇ ಮಾತರಂ ಮತ್ತು ಭಾರತ್ ಮಾತಾ ಕೀ ಜೈ ಎನ್ನುವ ಘೋಷಣೆಗಳೊಂದಿಗೆ ಆರಂಭವಾದ ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿಯವರ 25ನೇ ಪುಣ್ಯತಿಥಿ ಕಾರ್ಯಕ್ರಮದಲ್ಲಿ ದಿಗ್ವಿಜಯ್ ಸಿಂಗ್ ಮಾತನಾಡುತ್ತಿದ್ದರು.
ಕಾಂಗ್ರೆಸ್ ಪಕ್ಷ ಸವಾಲುಗಳನ್ನು ಎದುರಿಸುತ್ತಿದೆ. ಪಕ್ಷದಲ್ಲಿ ಕೆಲವು ಬದಲಾವಣೆಗಳನ್ನು ತರುವುದು ಅಗತ್ಯವಾಗಿದೆ ಎಂದು ಎಐಸಿಸಿ ಪ್ರದಾನ ಕಾರ್ಯದರ್ಶಿ ದಿಗ್ವಿಜಯ್ ಸಿಂಗ್ ಹೇಳಿದ್ದಾರೆ.
ವೆಬ್‌ದುನಿಯಾ
ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.