ಬೆಂಗಳೂರು: ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಗೆ ಪಕ್ಷ ಶಾಕ್ ಕೊಟ್ಟಿದೆ. ಕರ್ನಾಟಕ ಮತ್ತು ಗೋವಾ ರಾಜ್ಯಗಳ ಉಸ್ತುವಾರಿ ಜವಾಬ್ದಾರಿಯಿಂದ ಅವರಿಗೆ ಕೊಕ್ ನೀಡಲಾಗಿದೆ.
ಅವರ ಬದಲಿಯಾಗಿ ಕರ್ನಾಟಕಕ್ಕೆ ಸಂಸದ ಕೆಸಿ ವೇಣುಗೋಪಾಲ್ ಹಾಗೂ ಗೋವಾ ರಾಜ್ಯಕ್ಕೆ ಎ ಚೆಲ್ಲ ಕುಮಾರ್ ಅವರನ್ನು ನೇಮಕ ಮಾಡಲಾಗಿದೆ. ಗೋವಾದಲ್ಲಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದರೂ, ಸರ್ಕಾರ ರಚಿಸುವಲ್ಲಿ ವಿಫಲವಾದ ಹಿನ್ನಲೆಯಲ್ಲಿ ಅವರಿಗೆ ಆ ರಾಜ್ಯದ ಉಸ್ತುವಾರಿಯಿಂದ ಕೊಕ್ ನೀಡಲಾಗಿದೆ.
ಇನ್ನು ಕರ್ನಾಟಕದಲ್ಲಿ ಅವರ ಕಾರ್ಯ ವೈಖರಿಯ ಬಗ್ಗೆ ಪಕ್ಷದೊಳಗೇ ಅಸಮಾಧಾನವಿತ್ತು. ಅಲ್ಲದೆ, ಇತ್ತೀಚೆಗೆ ಸಿದ್ಧರಾಮಯ್ಯ ನೇತೃತ್ವದಲ್ಲಿಯೇ ಮುಂದಿನ ಚುನಾವಣೆ ಎದುರಿಸಲಾಗುವುದು ಎಂದು ಏಕಪಕ್ಷೀಯವಾಗಿ ಅವರು ಮಾಧ್ಯಮಗಳಿಗೆ ನೀಡಿದ ಹೇಳಿಕೆಗೆ ರಾಜ್ಯ ನಾಯಕರು ಹೈಕಮಾಂಡ್ ಗೆ ದೂರಿದ್ದರು.
ಈ ಎಲ್ಲಾ ಅಸಮಾಧಾನಗಳ ಹಿನ್ನಲೆಯಲ್ಲಿ ಅವರನ್ನು ಜವಾಬ್ದಾರಿಯಿಂದ ಮುಕ್ತಿಗೊಳಿಸಲಾಗಿದೆ. ಇದಲ್ಲದೆ, ಹಲವು ಬಾರಿ ಅವರೂ ಕೂಡಾ ರಾಹುಲ್ ಗಾಂಧಿ ಬಗ್ಗೆ ಪರೋಕ್ಷವಾಗಿ ಯಾರ ಮಾತನ್ನೂ ಕಿವಿ ಮೇಲೆ ಹಾಕಿಕೊಳ್ಳಲ್ಲ ಎಂದಿದ್ದರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ