Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಅಮರಾವತಿ : ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಕಟ್ಟಡ ಕುಸಿದು 3 ವರ್ಷದ ಮಗು ಸೇರಿದಂತೆ 4 ಮಂದಿ ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದ ಅನನಪುರ್ ಜಿಲ್ಲೆಯ ಮುಳಕೇಡು ಗ್ರಾಮದಲ್ಲಿ ನಡೆದಿದೆ.
ಮೃತರನ್ನು ಜೈನಬಿ (60), ದಾದು (36), ಶರ್ಫುನ್ನಿ (28) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ 3 ವರ್ಷದ ಮಗು ಕೂಡಾ ಸಾವನ್ನಪ್ಪಿದೆ. ಇನ್ನೂ ಇಬ್ಬರಿಗೆ ತೀವ್ರ ಸುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ರವಾನಿಸಲಾಗಿದೆ. ಅಡುಗೆ ಅನಿಲ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಅಕ್ಕಪಕ್ಕದ ಎರಡು ಮನೆಗಳಿಗೂ ಹಾನಿಯಾಗಿದೆ.
ಘಟನೆ ಕುರಿತು ಮಾಹಿತಿ ತಿಳಿದ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆ ಆರಂಭಿಸಿದ್ದಾರೆ.