ಭುವನೇಶ್ವರ : ಪಾಕಿಸ್ತಾನದ ಬೇಹುಗಾರಿಕಾ ಸಂಸ್ಥೆ ಏಜೆಂಟ್ಗಳೊಂದಿಗೆ ಸಿಮ್ ಕಾರ್ಡ್ಗಳು ಹಾಗೂ ಒಟಿಪಿಗಳನ್ನು ಹಂಚಿಕೊಳ್ಳುತ್ತಿದ್ದ ಮೂವರು ಆರೋಪಿಗಳನ್ನು ಒಡಿಶಾ ಪೊಲೀಸರ ವಿಶೇಷ ಕಾರ್ಯಪಡೆ ಬಂಧಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬಂಧಿತ ಆರೋಪಿಗಳು ನಯಾಗರ್ ಮತ್ತು ಜಾಜ್ಪುರ ಜಿಲ್ಲೆಗೆ ಸೇರಿದವರಾಗಿದ್ದು, ಪಠಾಣಿಸಮಂತ್ ಲೆಂಕಾ (35), ಸರೋಜ್ ಕುಮಾರ್ ನಾಯಕ್ (26) ಮತ್ತು ಸೌಮ್ಯಾ ಪಟ್ಟನಾಯಕ್ (19) ಎಂದು ಗುರುತಿಸಲಾಗಿದೆ.
ಈ ಎಲ್ಲಾ ಆರೋಪಿಗಳು ವಂಚನೆಯ ಮೂಲಕ ಇತರರ ಹೆಸರಿನಲ್ಲಿ ಅಪಾರ ಸಂಖ್ಯೆಯ ಸಿಮ್ಗಳನ್ನು ಪಡೆದುಕೊಂಡಿದ್ದರು. ಅಲ್ಲದೇ ಅದರ ಒಟಿಪಿಗಳನ್ನು ಪಾಕಿಸ್ತಾನದ ಪಿಐಒ ಮತ್ತು ಐಎಸ್ಐ ಏಜೆಂಟ್ಗಳು ಸೇರಿದಂತೆ ಅನೇಕ ಗ್ರಾಹಕರಿಗೆ ಮಾರಾಟ ಮಾಡುತ್ತಿದ್ದರು. ಇದಕ್ಕೆ ಪ್ರತಿಯಾಗಿ ಪಾಕಿಸ್ತಾನಿ ಏಂಜೆಟ್ಗಳು ಅವರಿಗೆ ಹಣವನ್ನು ನೀಡುತ್ತಿದ್ದರು ಎಂದು ತಿಳಿದುಬಂದಿದೆ.