ಡಿಎಂಕೆ ಮುಖ್ಯಸ್ಥ, ಮಾಜಿ ಮುಖ್ಯಮಂತ್ರಿ ಅಸ್ವಸ್ಥರಾದ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
92 ವರ್ಷ ವಯಸ್ಸಿನ ಮಾಜಿ ಸಿಎಂ ಕರುಣಾನಿಧಿ ನ್ಯೂಟ್ರೀಷನ್ ಮತ್ತು ಹೈಡ್ರೇಶನ್ ಸಮಸ್ಯೆಯಿದಾಗಿ ಬಳಲುತ್ತಿರುವುದರಿಂದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಆಸ್ಪತ್ರೆಯ ವೈದ್ಯ ಡಾ.ಅರವಿಂದನ್ ತಿಳಿಸಿದ್ದಾರೆ.
ಕರುಣಾನಿಧಿಯವರ ಆರೋಗ್ಯ ಸ್ಥಿರವಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ. ಕೆಲ ದಿನಗಳ ಕಾಲ ಆಸ್ಪತ್ರೆಯಲ್ಲಿ ವಿಶ್ರಾಂತಿ ಪಡೆಯುವ ಅಗತ್ಯವಿದೆ ಎಂದು ಮಾಹಿತಿ ನೀಡಿದ್ದಾರೆ.
ಏತನ್ಮಧ್ಯೆ, ಕಳೆದ ಸೆಪ್ಟೆಂಬರ್ 22 ರಂದು ಅನಾರೋಗ್ಯದಿಂದಾಗಿ ಅಪೋಲೋ ಆಸ್ಪತ್ರೆಗೆ ದಾಖಲಾಗಿರುವ ಮುಖ್ಯಮಂತ್ರಿ ಜಯಲಲಿತಾ ಆರೋಗ್ಯದಲ್ಲಿ ಸುಧಾರಣೆಯಾಗಿದ್ದು, ಕೆಲ ದಿನಗಳಲ್ಲಿ ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.