ಹೈದರಾಬಾದ್ : ಕಾಶ್ಮೀರದಲ್ಲಿ ಮಾನವ ಹಕ್ಕು ಉಲ್ಲಂಘನೆಯಾಗುತ್ತಿದೆ ಎಂದು ವಿಶ್ವಸಂಸ್ಥೆ ಬಿಡುಗಡೆ ಮಾಡಿದ್ದ ವರದಿಯಲ್ಲಿ ತಿಳಿಸಿರುವ ಹಿನ್ನಲೆಯಲ್ಲಿ ಇದೀಗ ಎಐಎಂಐಎಂ ಅಧ್ಯಕ್ಷ ಅಸಾದುದ್ದಿನ್ ಓವೈಸಿ ಅವರು ‘ಕಾಶ್ಮೀರದ ವಿಷಯದಲ್ಲಿ ಸುಖಾಸುಮ್ಮನೆ ತಲೆಹಾಕಬೇಡಿ’ ಎಂದು ವಿಶ್ವಸಂಸ್ಥೆಗೆ ಎಚ್ಚರಿಕೆ ನೀಡಿದ್ದಾರೆ.
ಈ ಬಗ್ಗೆ ಮಾತನಾಡಿದ ಅವರು,’ ಭಾರತದ ಆಂತರಿಕ ವಿಷಯದಲ್ಲಿ ತಲೆಹಾಕುವುದಕ್ಕೆ ವಿಶ್ವಸಂಸ್ಥೆಗೆ ಯಾವುದೇ ಹಕ್ಕಿಲ್ಲ. ಈ ವರದಿ ದೇಶದ ಪರಮಾಧಿಕಾರಕ್ಕೆ ಧಕ್ಕೆ ತರುತ್ತದೆ. ವಿಶ್ವಸಂಸ್ಥೆ ನಡೆಯನ್ನು ಖಂಡಿಸಲು ನಾವು ಭಾರತೀಯ ಸರ್ಕಾರದೊಂದಿಗಿದ್ದೇವೆ’ ಎಂದು ಹೇಳಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ