Webdunia - Bharat's app for daily news and videos

Install App

ಫೇಸ್ ಬುಕ್ ಗೆಳೆಯನ ಜೊತೆ ಓಡಿಹೋಗಲು ತಾಯಿ ತಡೆದದ್ದಕ್ಕೆ ಮಗಳು ಮಾಡಿದ್ದೇನು ಗೊತ್ತಾ?

Webdunia
ಬುಧವಾರ, 26 ಡಿಸೆಂಬರ್ 2018 (07:01 IST)
ಚೆನ್ನೈ : ದ್ವಿತೀಯಾ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ತಾನು ಪ್ರೀತಿಸುತ್ತಿದ್ದ ಫೇಸ್ ಬುಕ್ ಗೆಳೆಯನ ಜೊತೆ ಓಡಿಹೋಗಲು ಹೆತ್ತ ತಾಯಿಯನ್ನೇ ಕೊಲೆ ಮಾಡಿದ ಘಟನೆ ತಮಿಳುನಾಡಿನ ತಿರುವಳ್ಳೂರಿನಲ್ಲಿ ನಡೆದಿದೆ.


ಆಂಜನೇಯಪುರಂ ನಿವಾಸಿ ದೇವಿ ಪ್ರೀಯಾ(19) ಪ್ರೀತಿಸಿದವನಿಗೊಸ್ಕರ ಹೆತ್ತ ತಾಯಿಯನ್ನೆ ಕೊಂದ ಆರೋಪಿ. ಈಕೆ ಕಳೆದ ಆರು ತಿಂಗಳ ಹಿಂದೆ ಫೇಸ್​ಬುಕ್​​ನಲ್ಲಿ ಪರಿಚಯವಾಗಿದ್ದ ವಿವೇಕ್​ ಎಂಬ ವ್ಯಕ್ತಿಯನ್ನು ಪ್ರೀತಿಸುತ್ತಿದ್ದು, ಆತನ ಜೊತೆ ಓಡಿಹೋಗಲು ನಿರ್ಧರಿಸಿದ್ದಾಳೆ. ಅದಕ್ಕಾಗಿ ಆತ ಪ್ರಿಯಾಳನ್ನು ಕರೆದುಕೊಂಡು ಬರಲು ತನ್ನ ಇಬ್ಬರು ಗೆಳೆಯರನ್ನು ಕಳುಹಿಸಿದ್ದಾನೆ.


ಆದರೆ ತನ್ನ ಪ್ರಿಯಕರನ ಜೊತೆ ಹೋಗಲು ತಾಯಿ ಭಾನುಮತಿ ಅಡ್ಡ ಬಂದಳು ಎಂಬ ಕಾರಣಕ್ಕೆ ಚಾಕುವಿನಿಂದ ತಾಯಿಯನ್ನೇ ಇರಿದು ಕೊಲೆ ಮಾಡಿದ್ದಾಳೆ. ನಂತರ ಅಲ್ಲಿಂದ ಪರಾರಿಯಾಗಲು ಪ್ರಯತ್ನಿಸಿದ ಮೂವರನ್ನು ನೆರೆಹೊರೆಯವರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಳ ವಿಚಾರಣೆ ನಡೆಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments