ರೋಮ್ಯಾನ್ಸ್ ಮಾಡಲು ಒಪ್ಪದ ಕಾರಣಕ್ಕೆ ಅಪ್ರಾಪ್ತ ವಿದ್ಯಾರ್ಥಿನಿಯನ್ನು ಅಪ್ರಾಪ್ತ ವಿದ್ಯಾರ್ಥಿಯೊಬ್ಬ ಗುಂಡು ಹಾರಿಸಿದ ಘಟನೆ ಉತ್ತರ ಪ್ರದೇಶದಲ್ಲಿ ವರದಿಯಾಗಿದೆ.
ಮಥುರಾ ರಸ್ತೆಮಾರ್ಗದಲ್ಲಿ ಶಾಲೆಗೆ ಹೋಗುತ್ತಿದ್ದ 15 ವರ್ಷದ ವಿದ್ಯಾರ್ಥಿನಿಯನ್ನು ಕ್ಲಾಸ್ ಮೇಟ್ 16 ವರ್ಷದ ಬಾಲಕ ರೋಮ್ಯಾನ್ಸ್ ಮಾಡಲು ಕರೆದಿದ್ದಾರೆ. ಆದರೆ, ವಿದ್ಯಾರ್ಥಿನಿ ಒಪ್ಪಿಕೊಂಡಿಲ್ಲ ಇದಕ್ಕೆ ಕೋಪಗೊಂಡ ವಿದ್ಯಾರ್ಥಿ ಬೈಕ್‌ನಲ್ಲಿ ಬಂದು ಶಾಲೆಗೆ ಹೋಗುತ್ತಿದ್ದ ವಿದ್ಯಾರ್ಥಿನಿಯ ಮೇಲೆ ಗುಂಡು ಹಾರಿಸಿ ಪರಾರಿಯಾಗಿರುವ ಘಟನೆ ಉತ್ತರ ಪ್ರದೇಶದ ಮಥುರಾದಲ್ಲಿ ನಡೆದಿದೆ.
ಸ್ಥಳೀಯರು ವಿದ್ಯಾರ್ಥಿನಿಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ವಿದ್ಯಾರ್ಥಿಯ ಪತ್ತೆಗೆ ಶೋಧ ನಡೆಸಿದ್ದಾರೆ. ವಿದ್ಯಾರ್ಥಿನಿಯ ಸ್ಥಿತಿ ಚಿಂತಾಜನಕವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.