ಮಿಜೋರಾಂ: ಮಿಜೋರಾಂ ರಾಜ್ಯದಲ್ಲಿ ಪ್ರವಾಸ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿ ಐಜ್ವಾಲ್ ನಲ್ಲಿ 60 ಮೆಗಾವ್ಯಾಟ್ ಜಲವಿದ್ಯುತ್ ಘಟಕವನ್ನು ಉದ್ಘಾಟಿಸಿದರು. ಇದರ ಜತೆಗೆ ಈಶಾನ್ಯ ರಾಜ್ಯಗಳ ಅಭಿವೃದ್ಧಿಗೆ ಸರ್ಕಾರ ಕಟಿಬದ್ಧ ಎಂದು ಭರವಸೆ ಕೂಡ ನೀಡಿದ್ದಾರೆ.
ಇನ್ನು 1998ರಲ್ಲಿ ಜಲವಿದ್ಯುತ್ ಯೋಜನೆಗೆ ಚಾಲನೆ ಸಿಕ್ಕಿತ್ತು, ಪ್ರದಾನಿ ಅಟಲ್ ಬಿಹಾರಿ ವಾಜಪೇಯಿ ಈ ಯೋಜನೆಗೆ ಚಾಲನೆ ನೀಡಿದ್ದರು, ಆದರೆ ನಂತರದ ದಿನದಲ್ಲಿ ಯೋಜನೆ ಕುಂಟುತ್ತಾ ಸಾಗಿತ್ತು. ನಾವು ಅಧಿಕಾರಕ್ಕೆ ಬಂದ ಮೇಲೆ ಯೋಜನೆ ಚುರುಕಾಯಿತು ಎಂದು ಪರೋಕ್ಷವಾಗಿ ಯುಪಿಎ ಸರ್ಕಾರದ ವಿರುದ್ಧ ವಾಗ್ಧಾಳಿ ನಡೆಸಿದರು ನರೇಂದ್ರ ಮೋದಿ.
ಪ್ರತಿ ಮನೆಗೂ ವಿದ್ಯುತ್ ನೀಡಲು ಈ ಯೋಜನೆ ಅನುಕೂಲವಾಗಲಿದೆ ಎಂದು ಜಲವಿದ್ಯುತ್ ಘಟಕ ಉದ್ಘಾಟಿಸಿ ಪ್ರಧಾನಿ ಮೋದಿ ಹೇಳಿದರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ