ಉತ್ತರ ಪ್ರದೇಶ : ನೆರೆಮನೆಯ ಯುವಕನೊಬ್ಬ ಮನೆಯ ಟೇರೆಸ್ ಮೇಲೆ ಮಲಗಿದ್ದ ಹದಿಹರೆಯದ ಹುಡುಗಿಯ ಮೇಲೆ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿದ ಘಟನೆ ಉತ್ತರಪ್ರದೇಶದ ಬಲ್ಲಿಯಾ ಜಿಲ್ಲೆಯ ಹಳ್ಳಿಯೊಂದರಲ್ಲಿ ನಡೆದಿದೆ.
ಹುಡುಗಿಯ ಕೂಗು ಕೇಳಿ ಹತ್ತಿರ ಮಲಗಿದ್ದ ತಂದೆ ಎಚ್ಚರಗೊಂಡಾಗ ಆರೋಪಿ ಪರಾರಿಯಾಗಿದ್ದಾನೆ. ಆಕೆಯನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವಳ ಸ್ಥಿತಿ ಬಹಳ ಗಂಭೀರವಾಗಿದೆ ಎನ್ನಲಾಗಿದೆ. ಹುಡುಗಿ ಮನೆಯಿಂದ ಹೊರಗೆ ಹೋದಾಗಲೆಲ್ಲಾ ಆರೋಪಿ ಆಕೆಗೆ ಕಿರುಕುಳ ನೀಡುತ್ತಿದ್ದ ಎಂದು ಸಂತ್ರಸ್ತೆಯ ತಂದೆ ಆರೋಪಿಸಿದ್ದಾರೆ.
ಸಂತ್ರಸ್ತೆಯ ಕುಟುಂಬ ನೀಡಿದ ದೂರಿನ ಹಿನ್ನಲೆಯಲ್ಲಿ ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯ ಬಂಧನಕ್ಕೆ ಬಲೆ ಬೀಸಿದ್ದಾರೆ ಎನ್ನಲಾಗಿದೆ.