ಭೋಪಾಲ್ : ಹೆಣ್ಣು ಮಗುವಿಗೆ ಜನ್ಮ ನೀಡಿದ ಮಹಿಳೆಯನ್ನು ಆಕೆಯ ಪತಿ ಹಾಗೂ ಗಂಡನ ಮನೆಯವರು ಸೇರಿ ಜೀವಂತವಾಗಿ ಸುಟ್ಟ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.
ಆಯುಷಿ ಶಾಹು(20 ವರ್ಷ) ಮೃತಪಟ್ಟ ಮಹಿಳೆ. ಈಕೆಗೆ ಪತಿಯ ಮನೆಯವರು ವರದಕ್ಷಿಣೆ ಕಿರುಕುಳ ನೀಡುತ್ತಿದ್ದರಂತೆ. ಅಷ್ಟೇ ಅಲ್ಲದೇ ಆಕೆ ಗರ್ಭ ಧರಿಸಿದಾಗ ಗಂಡು ಮಗುವೇ ಹುಟ್ಟಲಿ ಎಂದು ಇಂಜೆಕ್ಷನ್ ಕೊಡಿಸಿದ್ದರಂತೆ. ಆದರೆ ಇದೀಗ ಆಕೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ ಎಂದು ಆಕೆಗೆ ಬೆಂಕಿ ಹಚ್ಚಿದ್ದಾರೆ. ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಿಸಲಾದ ಆಕೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾಳೆ.
ಲಿಯಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತಳ ಪತಿ, ಅತ್ತೆ- ಮಾವ, ನಾದಿನಿ ಸೇರಿ ಆಕೆಯನ್ನು ಕೊಂದಿದ್ದಾರೆ ಎಂದು ಮೃತಳ ಪೋಷಕರು ದೂರಿದ್ದಾರೆ. ಸದ್ಯ ಆರೋಪಿಗಳು ಪರಾರಿಯಾಗಿದ್ದು ಪೊಲೀಸರು ಹುಡುಕಾಟ ನಡೆಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.