ನವದೆಹಲಿ : 7ವರ್ಷದ ಬಾಲಕಿಗೆ ಆಹಾರ ನೀಡಿ ಟೀ ಅಂಗಡಿ ಮಾಲೀಕನೊಬ್ಬ ಆಕೆಯ ಮೇಲೆ ಅತ್ಯಾಚಾರ ಎಸಗಿದ ಘಟನೆ ದೆಹಲಿಯಲ್ಲಿ ನಡೆದಿದೆ.
ಸಂತ್ರಸ್ತ ಬಾಲಕಿಯ ತಾಯಿಗೆ ಪರಿಚಿತನಾಗಿರುವ ಆರೋಪಿ, ಬಾಲಕಿ ಶಾಲೆ ಮುಗಿಸಿ ಮನೆಗೆ ಹೋಗುತ್ತಿದ್ದಾಗ ಆಕೆಯನ್ನು ಕರೆದು ತಿಂಡಿಗಳನ್ನು ನೀಡಿ ಅಂಗಡಿಯ ಹಿಂಬದಿಗೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾನೆ. ಅಲ್ಲದೇ ಈ ವಿಚಾರವನ್ನು ಯಾರಿಗೂ ತಿಳಿಸದಂತೆ ಬೆದರಿಕೆ ಹಾಕಿದ್ದಾನೆ.
ಈ ಘಟನೆಯಿಂದ ಬಾಲಕಿ ನಡೆಯಲಾಗದೆ ಒದ್ದಾಡಿಕೊಂಡು ಬರುತ್ತಿರುವುದನ್ನು ಕಂಡು ತಾಯಿ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಆಕೆಯನ್ನು ಪರೀಕ್ಷಿಸಿದ ವೈದ್ಯರು ಅತ್ಯಾಚಾರ ನಡೆದಿರುವುದಾಗಿ ತಿಳಿಸಿದ್ದಾರೆ. ಬಳಿಕ ತಾಯಿ ಬಾಲಕಿಯನ್ನು ವಿಚಾರಿಸಿದಾಗ ಆಕೆ ನಡೆದ ವಿಚಾರವನ್ನು ತಿಳಿಸಿದ್ದಾಳೆ. ತಕ್ಷಣ ತಾಯಿ ಆರೋಪಿಯ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದು, ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.