ಹಿಮಾಚಲ ಪ್ರದೇಶ : ಖಾಸಗಿ ಕಾಲೇಜೊಂದರ ಹಿರಿಯ ಶಿಕ್ಷಕನು ತನ್ನ ವಿದ್ಯಾರ್ಥಿನಿಯೋರ್ವಳನ್ನು ಕಾಲೇಜಿನ ಸ್ಟಾಫ್ ರೂಮ್ ವೊಂದರಲ್ಲಿ ಕೂಡಿ ಹಾಕಿ ಆಕೆಯ ಮೇಲೆ ಅತ್ಯಾಚಾರ ಎಸಗಿದ ಹೇಯ ಕೃತ್ಯವೊಂದು ನಡೆದಿದೆ.
ಕೆಮಿಸ್ಟ್ರಿ ಶಿಕ್ಷಕನು ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿಯನ್ನು ಸ್ಟಾಫ್ ರೂಮಿಗೆ ಕರೆಸಿಕೊಂಡು ಒಳಗಿನಿಂದ ಚಿಲಕ ಹಾಕಿ ಆಕೆಯ ಮೇಲೆ ಅತ್ಯಾಚಾರ ನಡೆಸಿದ್ದಾನೆ ಎಂದು ತಿಳಿದು ಬಂದಿದೆ.
ಸಂತ್ರಸ್ತ ವಿದ್ಯಾರ್ಥಿನಿಯು ತನ್ನಮೇಲಾದ ಅತ್ಯಾಚಾರವನ್ನು ಕಾಲೇಜಿನಲ್ಲಿ ಇತರರ ಬಳಿ ಹೇಳಿಕೊಂಡಾಗಲೇ ಈ ವಿಷಯ ಬೆಳಕಿಗೆ ಬಂದಿದೆ.
ಅತ್ಯಾಚಾರ ಎಸಗಿದ ಆರೋಪಿ ಶಿಕ್ಷಕನನ್ನು ಪೊಲೀಸರು ಬಂಧಿಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ ಎಂದು ಜಿಲ್ಲಾ ಪೊಲೀಸ್ ಮುಖ್ಯಸ್ಥರು ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ