ರಾಜಸ್ತಾನ : ಪತಿ ಕಪ್ಪು ಎಂದಿದ್ದಕ್ಕೆ ಮನನೊಂದು ನವವಿವಾಹಿತೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಜಸ್ತಾನದ ಜಲ್ವಾರ್ ಜಿಲ್ಲೆಯಲ್ಲಿ ನಡೆದಿದೆ.
ಮಂಗಿಬಾಯಿ (21) ಆತ್ಮಹತ್ಯೆ ಮಾಡಿಕೊಂಡ ನವವಿವಾಹಿತೆ. ಇತ್ತೀಚೆಷ್ಟೇ ದಿನೇಶ ಎಂಬಾತನನ್ನು ಮದುವೆಯಾದ ಈಕೆಗೆ ಪತಿ ಯಾವಾಗಲೂ ನೀನು ಕಪ್ಪಾಗಿದ್ದೆ ಎಂದು ವ್ಯಂಗ್ಯ ಮಾಡುತ್ತಿದ್ದ. ಇದರಿಂದ ಮನನೊಂದ ಮಂಗಿಬಾಯಿ ಮನೆಯ ಎದುರುಗಡೆ ಇರುವ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಈ ಘಟನೆಗೆ ಸಂಬಂಧಿಸಿದಂತೆ ಮಂಗಿಬಾಯಿ ತಂದೆ, ಅಳಿಯನ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದು, ಆಕೆಗೆ ಪತಿ ಮಾನಸಿಕ ಕಿರುಕುಳ ನೀಡುತ್ತಿದ್ದ ಹಿನ್ನಲೆಯಲ್ಲಿ ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಆರೊಪಿಸಿದ್ದಾರೆ.