Publish Date: Mon, 11 May 2020 (09:28 IST)
Updated Date: Mon, 11 May 2020 (09:30 IST)
ನವದೆಹಲಿ: ಮಾಜಿ ಪ್ರಧಾನಿ ಮನಮಹೋನ್ ಸಿಂಗ್ ತೀವ್ರ ಎದೆನೋವಿನಿಂದಾಗಿ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ನಿನ್ನೆ ರಾತ್ರಿ ಎದೆನೋವು ಕಾಣಿಸಿಕೊಂಡ ಹಿನ್ನಲೆಯಲ್ಲಿ ಮನಮೋಹನ್ ಸಿಂಗ್ ರನ್ನು ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರನ್ನು ತೀವ್ರ ನಿಗಾ ಘಟಕದಲ್ಲಿರಿಸಿ ವಿಶೇಷವಾಗಿ ನೋಡಿಕೊಳ್ಳಲಾಗುತ್ತಿದೆ ಎಂದು ಏಮ್ಸ್ ಆಸ್ಪತ್ರೆ ಮೂಲಗಳು ಹೇಳಿವೆ.
ಸದ್ಯಕ್ಕೆ ಅವರ ಆರೋಗ್ಯ ಸ್ಥಿರವಾಗಿದೆ. 87 ವರ್ಷದ ಮನಮೋಹನ್ ಸಿಂಗ್ ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಲವರು ಸಾಮಾಜಿಕ ಜಾಲತಾಣಗಳ ಮೂಲಕ ಹಾರೈಸಿದ್ದಾರೆ.