ನವದೆಹಲಿ: ಶಿಕ್ಷೆಗೊಳಗಾದ ರಾಜಕಾರಣಿಗಳಿಗೆ ಕೇಂದ್ರ ಚುನಾವಣಾ ಆಯೋಗ ಶಾಕ್ ನೀಡಿದೆ.
ಸುಪ್ರೀಂಕೋರ್ಟ್ ಗೆ ಸಲ್ಲಿಸಿರುವ ಅಫಿಡಿಟ್ ನ್ನು ಕೇಂದ್ರ ಚುನಾವಣಾ ಆಯೋಗ ಸಮರ್ಥಿಸಿಕೊಂಡಿದೆ. ಈ ವಿಚಾರದಲ್ಲಿ ಮತ್ತೊಮ್ಮೆ ಚಿಂತಿಸುವ ಪ್ರಮೇಯವೇ ಇಲ್ಲ ಎಂದು ಹೇಳಿದೆ. ಶಿಕ್ಷೆಗೊಳಗಾದ ರಾಜಕಾರಣಿಗಳು ಜೀವನ ಪರ್ಯಂತ ಚುನಾವಣೆಗೆ ನಿಲ್ಲದಂತೆ ನಿಷೇಧ ಹೇರಲು ಅಜೀವ ನಿಷೇಧ ಹೇರಲು ಕ್ರಮ ಸರಿಯಾಗಿದೆ ಎಂದು ಚುನಾವಣಾ ಆಯೋಗ ಅಫಿಡವಿಟ್ ನಲ್ಲಿ ತಿಳಿಸಿದೆ.
ಈ ಕ್ರಮದಿಂದ ರಾಜಕೀಯದಲ್ಲಿ ಕ್ರಿಮಿನಲ್ ಚಟುವಟಿಕೆ ನಿಲ್ಲಲು ಸಹಕಾರಿಯಾಗಲಿದೆ. ಈಗಾಗಲೇ ನಮ್ಮ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರಕ್ಕೂ ಕಳುಹಿಸಿದ್ದೇವೆ ಎಂದು ಸುಪ್ರೀಂಕೋರ್ಟ್ ಗೆ ಕೇಂದ್ರ ಚುನಾವಣಾ ಆಯೋಗ ಮಾಹಿತಿ ನೀಡಿದೆ.