ನವದೆಹಲಿ: ಮುಂಬರುವವ ಗುಜರಾತ್ ಮತ್ತು ಹಿಮಾಚಲ ಪ್ರದೇಶ ರಾಜ್ಯಗಳ ವಿಧಾನಸಭೆ ಚುನಾವಣೆಗೆ ಚುನಾವಣಾ ಆಯೋಗ ಇಂದು ದಿನಾಂಕ ಪ್ರಕಟಿಸಲಿದೆ.
ಇಂದು ಸಂಜೆ ನಾಲ್ಕು ಗಂಟೆಗೆ ಚುನಾವಣಾ ಆಯೋಗ ಎರಡು ರಾಜ್ಯಗಳ ಚುನಾವಣಾ ದಿನಾಂಕ ಪ್ರಕಟಿಸಲಿದೆ. ಹಿಮಾಚಲ ಪ್ರದೇಶದಲ್ಲಿ ಒಂದು ಹಂತದ ಚುನಾವಣೆ ನಡೆಯಲಿದ್ದು, ಗುಜರಾತ್ ನಲ್ಲಿ ಎರಡು ಹಂತದಲ್ಲಿ ಚುನಾವಣೆ ನಡೆಯುವ ಸಂಭವವಿದೆ.
ಗುಜರಾತ್ ಚುನಾವಣೆ ಆಡಳಿತಾರೂಢ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಭಾರೀ ಪೈಪೋಟಿಯಿದೆ. ಈಗಾಗಲೇ ಉಭಯ ಪಕ್ಷಗಳು ಪ್ರಚಾರ ಕಾರ್ಯ ಶುರು ಮಾಡಿವೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ