ಛತ್ತೀಸ್‌ಗಢ: ದಾಂತೇವಾಡ-ಬಿಜಾಪುರ ಗಡಿಯಲ್ಲಿರುವ ಅರಣ್ಯದಲ್ಲಿ ಮಂಗಳವಾರ ನಡೆದ ಎನ್‌ಕೌಂಟರ್ ಕಾರ್ಯಾಚರಣೆಯಲ್ಲಿ 9 ನಕ್ಸಲರು ಹತ್ಯೆಯಾಗಿರುವುದನ್ನು ಪೊಲೀಸ್ ಮೂಲಗಳು ಖಚಿತಪಡಿಸಿವೆ. ನಕ್ಸಲರಿಂದ ಸ್ವಯಂಚಾಲಿತ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ದಾಂತೇವಾಡ ಎಸ್ಪಿ ಗೌರವ್ ರೈ ಅವರು ನಕ್ಸಲರಿಂದ ಹೆಚ್ಚಿನ ಸಂಖ್ಯೆಯ ಎಸ್‌ಎಲ್‌ಆರ್ ರೈಫಲ್‌ಗಳು, .303 ರೈಫಲ್ಸ್ ಮತ್ತು .315 ಬೋರ್ ರೈಫಲ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಕಾರ್ಯಾಚರಣೆಯಲ್ಲಿ ತೊಡಗಿರುವ ಎಲ್ಲಾ ಭದ್ರತಾ ಪಡೆ ಸಿಬ್ಬಂದಿ ಸುರಕ್ಷಿತವಾಗಿದ್ದಾರೆ ಎಂದು ಹೇಳಲಾಗಿದೆ.
ಈ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ಮುಂದುವರಿದಿದೆ. ಕಾರ್ಯಾಚರಣೆ ಪೂರ್ಣಗೊಂಡ ನಂತರ ವಿವರವಾದ ವರದಿಯನ್ನು ಬಿಡುಗಡೆ ಮಾಡಲಾಗುವುದು ಎಂದು ಹೇಳಿದ್ದಾರೆ..
ದಂತೇವಾಡ ಮತ್ತು ಬಿಜಾಪುರ ಜಿಲ್ಲೆಗಳ ಗಡಿ ಪ್ರದೇಶದಲ್ಲಿ ಪಶ್ಚಿಮ ಬಸ್ತಾರ್ ವಿಭಾಗದಿಂದ ಮಾವೋವಾದಿಗಳ ಉಪಸ್ಥಿತಿಯ ಬಗ್ಗೆ ಮಾಹಿತಿ ಪಡೆದ ನಂತರ ಜಂಟಿ ಪೊಲೀಸ್ ತಂಡವು ಶೋಧ ಕಾರ್ಯಾಚರಣೆಯನ್ನು ನಡೆಸಿತು. ಮಂಗಳವಾರ ಬೆಳಗ್ಗೆ 10:30ಕ್ಕೆ ಪೊಲೀಸ್ ಪಡೆಗಳು ಮತ್ತು ನಕ್ಸಲರ ನಡುವೆ ಎನ್‌ಕೌಂಟರ್ ಆರಂಭವಾಗಿದೆ.