Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಲಖನೌ : ಪಂಜಾಬ್ ವಿಧಾನಸಭೆಯ ಎಲ್ಲ 117 ಕ್ಷೇತ್ರಗಳು ಹಾಗೂ ಉತ್ತರ ಪ್ರದೇಶ ವಿಧಾನಸಭೆಗೆ ಭಾನುವಾರ ನಡೆದ ಮೂರನೇ ಹಂತದ ಮತದಾನ ಶಾಂತಿಯುತವಾಗಿ ನಡೆದಿದೆ.
ಪ್ರಾಥಮಿಕ ವರದಿಗಳ ಪ್ರಕಾರ ಪಂಜಾಬ್ನಲ್ಲಿ ಶೇ.64.27 ಹಾಗೂ ಉತ್ತರ ಪ್ರದೇಶದಲ್ಲಿ ಶೇ.60.08ರಷ್ಟು ಮತದಾನವಾಗಿದೆ.
ಉತ್ತರ ಪ್ರದೇಶದ 59 ವಿಧಾನಸಭೆ ಕ್ಷೇತ್ರಗಳು ಸೇರಿದಂತೆ ಎರಡೂ ರಾಜ್ಯಗಳಲ್ಲಿ ಯಾವುದೇ ಅಹಿತಕರ ಘಟನೆಗಳು ವರದಿಯಾಗಿಲ್ಲ. ಕೆಲವೆಡೆ ವಿದ್ಯುನ್ಮಾನ ಮತಯಂತ್ರದಲ್ಲಿ ಸಣ್ಣ ಪುಟ್ಟ ತಾಂತ್ರಿಕ ಸಮಸ್ಯೆಗಳು ಕಂಡು ಬಂದವು.
ಪ್ರತಿಪಕ್ಷಗಳು, 'ಬಿಜೆಪಿಯು ಮತಯಂತ್ರಗಳನ್ನು ದುರ್ಬಳಕೆ ಮಡಿಕೊಂಡಿದೆ' ಎಂದು ಆರೋಪಿಸಿವೆ.