Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಮುಂಬೈ: ಮಾಜಿ ಪ್ರೇಯಸಿಯನ್ನು ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವಕನನ್ನು ಬಂಧಿಸಲಾಗಿದೆ.
ಎರಡು ದಿನಗಳ ಹಿಂದೆ ಮುಂಬೈನ ವರ್ಸೋವಾ ಬೀಚ್ ನಲ್ಲಿ 19 ವರ್ಷದ ಯುವತಿಯ ಮೃತದೇಹ ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿತ್ತು.
ವಿಚಾರಣೆ ನಡೆಸಿದ ಪೊಲೀಸರಿಗೆ ಈ ಪ್ರಕರಣದ ಹಿಂದೆ ಆಕೆಯ ಪ್ರಿಯಕರನ ಕೈವಾಡವಿರುವುದು ಪತ್ತೆಯಾಗಿತ್ತು. ಹೀಗಾಗಿ ಪೊಲೀಸರು ಈಗ ಯುವಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.