ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಸತೀಶ್ ಜಾರಕಿಹೊಳಿ ಕಾಂಗ್ರೆಸ್ ಪಕ್ಷವನ್ನು ತೊರೆದು ಜೆಡಿಎಸ್ ಪಕ್ಷಕ್ಕೆ ಸೇರಲಿದ್ದಾರೆ ಎನ್ನುವ ವರದಿಗಳು ಹರಡಿವೆ.
ನಗರದ ಎಪಿಎಂಸಿ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಸೋಲಿಗೆ ಸತೀಶ್ ಜಾರಕಿಹೊಳಿ ಕಾರಣ ಎನ್ನುವ ಆರೋಪಗಳಿಂದ ಬೇಸತ್ತು ಇತರ ರಾಜಕೀಯ ಪರಕ್ಷಗಳತ್ತ ಮುಖ ಹಾಗಿದ್ದಾರೆ ಎನ್ನಲಾಗಿದೆ.
ಬೆಳಗಾವಿ ಗ್ರಾಮಾಂತರ ಕ್ಷೇತ್ರದಲ್ಲಿ 2013 ರ ಚುನಾವಣೆಯಲ್ಲಿ ಸೋಲನುಭವಿಸಿದ್ದ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತೆ ಅದೇ ಕ್ಷೇತ್ರದಿಂದ ಸ್ಪರ್ಧಿಸಲು ಬಯಸಿದ್ದಾರೆ. ಎಪಿಎಂಸಿ ಚುನಾವಣೆಯಲ್ಲಿ ಆರು ಕಾಂಗ್ರೆಸ್ ಸದಸ್ಯರ ಗೆಲುವಿಗೆ ಲಕ್ಷ್ಮಿ ಕಾರಣರಾಗಿದ್ದರು.
ಇತ್ತೀಚೆಗೆ ಸಚಿವ ರಮೇಶ್ ಜಾರಕಿಹೊಳಿ ಮತ್ತು ಲಕ್ಷ್ಮಿ ಹೆಬ್ಬಾಳ್ಕರ್ ಮನೆ ಮೇಲೆ ನಡೆದ ಆದಾಯ ತೆರಿಗೆ ದಾಳಿ, ಸತೀಶ್ ಜಾರಕಿಹೊಳಿ ಜೊತೆಗಿನ ರಾಜಕೀಯ ಸಂಬಂಧ ಹಳಸಲು ಕಾರಣವಾಯಿತು.
ಜಿಲ್ಲೆಯ ಕಾಂಗ್ರೆಸ್ ಮುಖಂಡರ ನಿವಾಸಗಳ ಮೇಲ ಐಟಿ ರೈಡ್ ಹಿಂದೆ ಸತೀಶ್ ಅವರ ಕೈವಾಡವಿದೆ ಎನ್ನುವ ಆರೋಪಗಳು ಕೇಳಿಬಂದಿದ್ದವು. ಆರೋಪಗಳಿಗೆ ಜಾರಕಿಹೊಳಿ ಸ್ಪಷ್ಟನೆ ಕೂಡಾ ನೀಡಿದ್ದರು.
ಎಪಿಎಂಸಿ ಚುನಾವಣೆಯಲ್ಲಿ ಕಾಂಗ್ರೆಸ್ ವಿರುದ್ಧವಾಗಿ ನಡೆದುಕೊಂಡಿದ್ದರಿಂದ ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರ ತಪ್ಪಿತು ಎಂದು ಸಚಿವ ರಮೇಶ್ ಜಾರಕಿಹೊಳಿ ಮತ್ತು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷೆ ಲಕ್ಷ್ಮಿ ಹೆಬ್ಬಾಳ್ಕರ್ ಆಕ್ರೋಷ ವ್ಯಕ್ತಪಡಿಸಿದ್ದರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.