Publish Date: Wed, 13 Oct 2021 (20:22 IST)
Updated Date: Wed, 13 Oct 2021 (20:25 IST)
ನವದೆಹಲಿ: ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರು ಅಸ್ವಸ್ಥರಾಗಿದ್ದು, ದೆಹಲಿಯ ಏಮ್ಸ್ ಆಸ್ಪತ್ರೆಗೆ ಇಂದು ಸಂಜೆ ದಾಖಲಾಗಿದ್ದಾರೆ.
ಕಳೆದ ಎರಡು ದಿನಗಳಿಂದ ಜ್ವರದಿಂದ ಬಳಲುತ್ತಿದ್ದ ಮನಮೋಹನ್ ಸಿಂಗ್ ಅವರನ್ನು ಇಂದು ಸಂಜೆ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯಕ್ಕೆ ಅವರ ಸ್ಥಿತಿ ಸ್ಥಿರವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
89 ವರ್ಷದ ಮನಮೋಹನ್ ಸಿಂಗ್ ಅವರಿಗೆ ಏಪ್ರಿಲ್ ನಲ್ಲಿ ಕೊರೋನಾ ಪಾಸಿಟಿವ್ ಆಗಿತ್ತು. ಅದರಿಂದ ಚೇತರಿಸಿಕೊಂಡ ಬಳಿಕ ಮತ್ತೆ ಸಣ್ಣ ಪ್ರಮಾಣದಲ್ಲಿ ಎದೆನೋವು ಕಾಣಿಸಿಕೊಂಡಿದ್ದರಿಂದ ಏಮ್ಸ್ ಗೆ ದಾಖಲಾಗಿದ್ದರು. ಸದ್ಯಕ್ಕೆ ಅವರ ಆರೋಗ್ಯ ಸ್ಥಿತಿ ಬಗ್ಗೆ ಆತಂಕಪಡುವ ಅಗತ್ಯವಿಲ್ಲ ಎಂದು ಏಮ್ಸ್ ವೈದ್ಯರು ಹೇಳಿದ್ದಾರೆ.