ಲಕ್ನೋ : ನೀಚ ಗುಣವಿರುವ ಮನುಷ್ಯರು ತಾವು ಪಾರಾಗಲು ಯಾವ ಕೀಳುಮಟ್ಟಕ್ಕೆ ಬೇಕಾದರೂ ಇಳಿಯುತ್ತಾರೆ ಎಂಬುದಕ್ಕೆ ಉತ್ತರ ಪ್ರದೇಶದ ಲಖಿಮ್ಪುರ್ ಖೇರಿ ಜಿಲ್ಲೆಯಲ್ಲಿ ನಡೆದ ಘಟನೆಯೇ ಒಂದು ಉತ್ತಮ ಉದಾಹರಣೆ.
ವ್ಯಕ್ತಿಯೊಬ್ಬ ಮೊಬೈಲ್ ಕಳ್ಳತನ ಮಾಡಿದ್ದು, ಈ ವಿಚಾರ ತಿಳಿದ ಪೊಲೀಸರು ಆತನನ್ನು ವಿಚಾರಣೆ ಮಾಡಲು ಆತನ ಮನೆಗೆ ಹೋಗಿದ್ದ ವೇಳೆ ಆತ ಪೊಲೀಸರಿಂದ ತಪ್ಪಿಸಿಕೊಳ್ಳಲು ತನ್ನ ಸಹೋದರಿಯ ಬಟ್ಟೆ ಬಿಚ್ಚಿ ಎಲ್ಲರ ಮುಂದೆ ಆಕೆಯನ್ನು ತಂದು ನಿಲ್ಲಿಸಿ ಪೊಲೀಸರು ನನ್ನ ಸಹೋದರಿಗೆ ಕಿರುಕುಳ ನೀಡಿದ್ದಾರೆಂದು ಸಾಬೀತು ಮಾಡಲು ಪ್ರಯತ್ನ ಮಾಡಿದ್ದಾನೆ.
ವಿಚಾರಣೆ ವೇಳೆ ಪೊಲೀಸರು ಎಲ್ಲಾ ದೃಶ್ಯವನ್ನು ತಮ್ಮ ಮೊಬೈಲ್ ನಲ್ಲಿ ರೆಕಾರ್ಡ್ ಮಾಡಿಕೊಂಡಿದ್ದ ಕಾರಣ ಆರೋಪಿ ಸುಳ್ಳು ಆರೋಪ ಮಾಡಿರುವುದು ಗೊತ್ತಾಗಿದೆ. ಬಳಿಕ ಈ ಕುರಿತು ಎಫ್ಐಆರ್ ದಾಖಲಿಸಿಕೊಂಡ ಪೊಲೀಸರು ವಿಡಿಯೋ ಆಧಾರದ ಮೇಲೆ ಆರೋಪಿ ಜೊತೆ ತನಿಖೆಯ ವೇಳೆ ತಡೆಯುಂಟು ಮಾಡಿದ್ದ ಇನ್ನು ನಾಲ್ವರ ವಿರುದ್ಧ ಪ್ರಕರಣವನ್ನು ದಾಖಲಿಸಿಕೊಂಡು ಬಂಧಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.