ಬೆಂಗಳೂರು: ಜಮ್ಮು-ಕಾಶ್ಮೀರ ಮತ್ತು ಹರಿಯಾಣ ವಿಧಾನಸಭೆಗೆ ಮತದಾನ ಇಂದು ಸಂಪನ್ನಗೊಂಡಿದ್ದು, ಇದೀಗ ಹೊರಬಂದಿರುವ ಸಮೀಕ್ಷೆ ಪ್ರಕಾರ ಬಿಜೆಪಿ ಹ್ಯಾಟ್ರಿಕ್ ಕನಸು ಭಗ್ನವಾಗಲಿದೆ.
ಅದರಂತೆ ಕಾಂಗ್ರೆಸ್ ಅಧಿಕಾರದ ಚುಕ್ಕಾಣಿ ಹಿಡಿಯುವ ಸಾಧ್ಯತೆಯಿದೆ.
ಇನ್ನೂ ಚುನಾವಣಾ ಫಲಿತಾಂಶ ಅಕ್ಟೋಬರ್ 8ರಂದು ಪ್ರಕಟಗೊಳ್ಳಲಿದ್ದು, ಯಾರಿಗೆ ಬಹುಮತ ಒಲಿಯಲಿದೆ ಎಂದು ಕುತೂಹಲ ಗರಿಗೆದರಿದೆ.
ಮತಚಲಾವಣೆಯ ಅವಧಿಯ ಮುಗಿಯುತ್ತದ್ದಂತೆ ವಿವಿಧ ವಿದ್ಯುನ್ಮಾನ ಮಾಧ್ಯಮಗಳು ಸಂಸ್ಥೆಗಳು ನಡೆಸಿದ ಮತಗಟ್ಟೆ ಸಮೀಕ್ಷೆ ಭಾರೀ ಕುತೂಹಲವನ್ನು ಮೂಡಿಸುತ್ತಿದೆ.
ಜಮ್ಮು ಮತ್ತು ಕಾಶ್ಮೀರ ಮತಗಟ್ಟೆ ಸಮೀಕ್ಷೆ: (ಒಟ್ಟು ಸ್ಥಾನ 90, ಮ್ಯಾಜಿಕ್ ಸಂಖ್ಯೆ: 46)
ದೈನಿಕ್ ಬಾಸ್ಕರ್ ಮತಗಟ್ಟೆ ಸಮೀಕ್ಷೆ ಪ್ರಕಾರ ಜಮ್ಮು ಮತ್ತು ಕಾಶ್ಮೀರದಲ್ಲಿ ಕಾಂಗ್ರೆಸ್‌ಗೆ 35ರಿಂದ 40 ಸ್ಥಾನಗಳು ಸಿಗಲಿವೆ. ಬಿಜೆಪಿ 20ರಿಂದ 25 ಸ್ಥಾನಗಳನ್ನು ಗಳಿಸಲಿವೆ.
ಪೀಪಲ್ಸ್ ಪಲ್ಸ್ ಪ್ರಕಾರ ಜಮ್ಮು-ಕಾಶ್ಮೀರದಲ್ಲಿ ಕಾಂಗ್ರೆಸ್ ಸರಳ ಬಹುಮತ ಪಡೆಯಲಿದ್ದು, 46ರಿಂದ 50 ಸ್ಥಾನಗಳನ್ನು ಗಳಿಸಲಿದೆ. ಬಿಜಿಪಿಗೆ 23ರಿಂದ 27 ಸ್ಥಾನಗಳು ಪಡೆಯಲಿವೆ ಎಂದು ಅಂದಾಜಿಸಲಾಗಿದೆ.
ಇಂಡಿಯಾ ಟುಡೇ ಸಿ-ವೋಟರ್ ಪ್ರಕಾರ ಜಮ್ಮು ಮತ್ತು ಕಾಶ್ಮೀರದಲ್ಲಿ ಕಾಂಗ್ರೆಸ್‌ಗೆ ಸರಳ ಬಹುಮತ ಸಿಗಲಿದೆ. ಕಾಂಗ್ರೆಸ್ 40ರಿಂದ 48 ಮತ್ತು ಬಿಜೆಪಿ 27ರಿಂದ 32 ಸ್ಥಾನಗಳನ್ನು ಗಳಿಸಲಿವೆ.