ಸಂಯುಕ್ತ ಕಿಸಾನ್ ಮೋರ್ಚಾ ಭಾನುವಾರ ಸುದ್ದಿಗೋಷ್ಠಿಯಲ್ಲಿ ಸಂಸತ್ ಮಳೆಗಾಲದ ಅಧಿವೇಶನದ ವೇಳೆ ಸಂಸತ್ ಭವನದ ಮುಂದೆ ಪ್ರತಿದಿನ ಪ್ರತಿಭಟನೆ ನಡೆಸುವುದಾಗಿ ಘೋಷಣೆ ಮಾಡಿದೆ.
ಈಗಾಗಲೇ ಪ್ರತಿಪಕ್ಷದ ಎಲ್ಲಾ ಸದಸ್ಯರಿಗೆ ಪತ್ರ ಬರೆದು ಕೃಷಿ ಮಸೂದೆ ಖಂಡಿಸಿ ಪ್ರತಿಭಟನೆ ನಡೆಸುವಂತೆ ಮನವಿ ಮಾಡಲಾಗಿದೆ. ಜುಲೈ 17ರಿಂದ ಸದನದಲ್ಲಿ ಪ್ರತಿದಿನ ಈ ವಿಷಯವನ್ನು ಪ್ರಸ್ತಾಪಿಸುವಂತೆ ವಿಶೇಷವಾಗಿ ಮನವಿ ಮಾಡಲಾಗಿದೆ ಎಂದು ಸಂಘಟನೆ ತಿಳಿಸಿದೆ.