ಶ್ರೀನಗರ : ರಾಷ್ಟ್ರಪತಿ ಸ್ಥಾನದ ಚುನಾವಣೆಗೆ ಸ್ಪರ್ಧಿಸುವ ಪ್ರಸ್ತಾಪವನ್ನು ನ್ಯಾಷನಲ್ ಕಾನ್ಪರೆನ್ಸ್ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಶನಿವಾರ ತಿರಸ್ಕರಿಸಿದ್ದಾರೆ.
ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಜಂಟಿ ವಿರೋಧ ಪಕ್ಷದ ಅಭ್ಯರ್ಥಿಯಾಗಿ ಫಾರೂಕ್ ಅಬ್ದುಲ್ಲಾ ಅವರ ಹೆಸರನ್ನು ಸೂಚಿಸಿದ್ದರು. ಆದರೆ ಫಾರೂಕ್ ಅಬ್ದುಲ್ಲಾ ಈ ಪ್ರಸ್ತಾಪವನ್ನು ನಿರಾಕರಿಸಿದ್ದಾರೆ ಹಾಗೂ ಜಮ್ಮು-ಕಾಶ್ಮೀರಕ್ಕೆ ಕೊಡುಗೆ ನೀಡಲು ಬಯಸುತ್ತಾರೆ ಎಂದಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಈಗಿನ ಪರಿಸ್ಥಿತಿಯಲ್ಲಿ ನನ್ನ ಸಹಕಾರದ ಅಗತ್ಯವಿದೆ. ಮುಂದೆ ನನಗೆ ರಾಜಕೀಯದಲ್ಲಿ ಹಾಗೂ ಸೇವೆಯಲ್ಲಿ ಹೇರಳ ಅವಕಾಶವಿದೆ. ಹೀಗಾಗಿ ನಾನು ರಾಷ್ಟ್ರಪತಿ ಚುನಾವಣೆಗೆ ನನ್ನ ಹೆಸರನ್ನು ಹಿಂಪಡೆಯಲು ಬಯಸುತ್ತೇನೆ ಎಂದು ತಿಳಿಸಿದ್ದಾರೆ.