Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಜೈಪುರ: ಇಬ್ಬರು ಅಪ್ರಾಪ್ತ ಹೆಣ್ಣು ಮಕ್ಕಳನ್ನು 8 ಲಕ್ಷ ರೂ.ಗೆ ಮಾರಾಟ ಮಾಡಿದ ತಂದೆಯನ್ನು ರಾಜಸ್ಥಾನ್ ನಲ್ಲಿ ಪೊಲೀಸರು ಬಂಧಿಸಿದ್ದಾರೆ.
ಈ ಸಂಬಂಧ ಇಬ್ಬರಲ್ಲಿ ಹಿರಿಯ ಮಗಳು ಪೊಲೀಸರಿಗೆ ದೂರು ನೀಡಿದ್ದಾಳೆ. ತಮ್ಮ ತಂದೆ ಹಣಕ್ಕಾಗಿ ನನಗೆ ಮತ್ತು ತಂಗಿಗೆ ಮದುವೆ ಮಾಡಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಳು.
ಹಣ ಪಡೆದ ಆರೋಪಿಗಳು ಹೆಣ್ಣು ಮಕ್ಕಳಿಗೆ ದೈಹಿಕವಾಗಿಯೂ ಹಿಂಸಿಸಿದ್ದಾರೆ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತಂದೆ ಹಾಗೂ ಇನ್ನೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ.