ನವದೆಹಲಿ : ತಂದೆ-ಮಗ ಇಬ್ಬರು ಲಕ್ಷಾಂತರ ರೂಪಾಯಿ ವಿದೇಶಿ ಕರೆನ್ಸಿಯನ್ನು ತಮ್ಮ ಖಾಸಗಿ ಅಂಗದಲ್ಲಿ ಬಚ್ಚಿಟ್ಟು ಕಳ್ಳಸಾಗಣಿಕೆ ಮಾಡಿ ಸಿಕ್ಕಿಬಿದ್ದ ಘಟನೆ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ.
ತಂದೆ ಹಾಗೂ ಮಗ ಇಬ್ಬರು 68 ಲಕ್ಷ ರೂಪಾಯಿ ವಿದೇಶಿ ಕರೆನ್ಸಿಯನ್ನು ತಮ್ಮ ಖಾಸಗಿ ಅಂಗದಲ್ಲಿ ಬಚ್ಚಿಟ್ಟು ಮುಂಬೈ ವಿಮಾನ ನಿಲ್ದಾಣದಲ್ಲಿ ವಿಮಾನವೇರಿದ್ದರು. ಆದರೆ ಕಸ್ಟಮ್ ಅಧಿಕಾರಿಗಳಿಗೆ ಮುಂಬೈನಿಂದ ಹಾಂಕಾಂಗ್ ಗೆ ಹೋಗುತ್ತಿದ್ದ ವಿಮಾನದಲ್ಲಿ ಕರೆನ್ಸಿ ಕಳ್ಳಸಾಗಣೆ ಮಾಡಲಾಗ್ತಿದೆ ಎಂಬ ಮಾಹಿತಿ ಸಿಕ್ಕಿದ ಹಿನ್ನಲೆಯಲ್ಲಿ ಅಧಿಕಾರಿಗಳು ವಿಮಾನದೊಳಗೆ ಪ್ರವೇಶ ಮಾಡಿ ತಪಾಸಣೆ ನಡೆಸಿದ್ದಾರೆ.
ಆಗ ತಂದೆ-ಮಗ ಸಿಕ್ಕಿಬಿದ್ದಿದ್ದಾರೆ. ದೆಹಲಿ ವಿಮಾನ ನಿಲ್ದಾಣದಲ್ಲಿ ಕಸ್ಟಮ್ ಅಧಿಕಾರಿಗಳು ತಂದೆ-ಮಗನನ್ನು ಬಂಧಿಸಿದ್ದಾರೆ. ಬಂಧಿತ ತಂದೆ-ಮಗನ ಬಳಿ 74 ಸಾವಿರ ಯುರೋ, 13 ಸಾವಿರ ಅಮೆರಿಕನ್ ಡಾಲರ್ ಹಾಗೂ 2400 ಹಾಂಕಾಂಗ್ ಡಾಲರ್ ಇತ್ತಂತೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.