ಕಾಂಗ್ರೆಸ್ ಪಕ್ಷದ ಅಧಿನಾಯಕಿ ಸೋನಿಯಾ ಗಾಂಧಿ ಅಳಿಯ ರಾಬರ್ಟ್ ವಾದ್ರಾಗೆ ಮತ್ತಷ್ಟು ಸಂಕಷ್ಟ ಎದುರಾಗಿದೆ. ಅವರ ವಿರುದ್ಧದ ಭೂ ಹಗರಣದಲ್ಲಿ ಎಫ್ಐಆರ್ ದಾಖಲಿಸಲಾಗಿದೆ.
ಮುಖ್ಯಮಂತ್ರಿ ವಸುಂಧರಾ ರಾಜೇ ರಾಜಸ್ಥಾನದಲ್ಲಿ ನಡೆದಿರುವ 18 ಭೂಹಗರಣಗಳ ಬಗ್ಗೆ ಸಿಬಿಐ ತನಿಖೆಗೆ ಆದೇಶಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಈಗಾಗಲೇ ಹರಿಯಾಣಾ ಸೇರಿದಂತೆ ಕೆಲ ರಾಜ್ಯಗಳಲ್ಲಿ ನಡೆದ ಹಲವು ಭೂಹಗರಣಗಳಲ್ಲಿ ಆರೋಪಿಯಾಗಿರುವ ರಾಬರ್ಟ್ ವಾದ್ರಾಗೆ ಮತ್ತೆ ಕಾನೂನಿನ ಕಾಟ ಮುಂದುವರಿದಿದೆ ಎನ್ನಲಾಗುತ್ತಿದೆ.
ಸಿಬಿಐ ತನಿಖೆ ಸೇರಿದಂತೆ ಯಾವುದೇ ತನಿಖೆ ನಡೆಯಲಿ. ಕಾನೂನಿಗೆ ಸಹಕರಿಸಲು ಸಿದ್ದ. ಕಾನೂನುಬದ್ಧವಾಗಿಯೇ ವಿಚಾರಣೆಯನ್ನು ಎದುರಿಸುತ್ತೇವೆ ಎಂದು ತಿಳಿಸಿದ್ದಾರೆ.
ಪ್ರಧಾನಮಂತ್ರಿ ನರೇಂದ್ರ ಮೋದಿ ಸರಕಾರ ಸೇಡಿನ ರಾಜಕೀಯ ಮಾಡುತ್ತಿದೆ. ನಾನು ಯಾವುದೇ ಭೂಹಗರಣದಲ್ಲಿ ಭಾಗಿಯಾಗಿಲ್ಲ ಎಂದು ರಾಬರ್ಟ್ ವಾದ್ರಾ ಸ್ಪಷ್ಟಪಡಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.