ಭೋಪಾಲ್ : ವಿದ್ಯಾರ್ಥಿಗಳ ಶೈಕ್ಷಣಿಕ ಸೌಲಭ್ಯಗಳ ನಿರ್ವಹಣೆಗಾಗಿ ಸಂಗ್ರಹಿಸಿದ ಹಣವನ್ನು ದುರುಪಯೋಗವಾಗಿದೆ ಎಂದು ಆರೋಪಿಸಿ ಮೇಧಾ ಪಾಟ್ಕರ್ ಸೇರಿದಂತೆ 11 ಜನರ ವಿರುದ್ಧ ಎಫ್ಐಆರ್ ದಾಖಲಾದ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.
ಮಧ್ಯಪ್ರದೇಶದ ಬರ್ವಾನಿ ಜಿಲ್ಲೆಯ ಬುಡಕಟ್ಟು ಜನರ ಶೈಕ್ಷಣಿಕ ಸೌಲಭ್ಯಗಳ ನಿರ್ವಹಣೆಗಾಗಿ ಸಂಗ್ರಹಿಸಿದ ಹಣವನ್ನು ನರ್ಮದಾ ಬಚಾವೊ ಆಂದೋಲನದ ನಾಯಕಿ ಮೇಧಾ ಪಾಟ್ಕರ್ ಸೇರಿದಂತೆ 11 ಜನರು ರಾಜಕೀಯ ಹಾಗೂ ದೇಶ ವಿರೋಧಿ ಕಾರ್ಯಕ್ಕಾಗಿ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಅಲ್ಲಿನ ಗ್ರಾಮಸ್ಥರು ಆರೋಪಿಸಿದ್ದಾರೆ.
ಮುಂಬೈನಲ್ಲಿ ನೋಂದಣಿಯಾಗಿರುವ ನರ್ಮದಾ ನವನಿರ್ಮಾಣ ಅಭಿಯಾನ (ಎನ್ಎನ್ಎ) ಟ್ರಸ್ಟ್, ಮಧ್ಯಪ್ರದೇಶ ಮತ್ತು ಮಹಾರಾಷ್ಟ್ರದ ನರ್ಮದಾ ಕಣಿವೆಯ ಬುಡಕಟ್ಟು ವಿದ್ಯಾರ್ಥಿಗಳಿಗೆ ವಸತಿ ಶೈಕ್ಷಣಿಕ ಸೌಲಭ್ಯಗಳನ್ನು ನಡೆಸಲು ಸಂಗ್ರಹಿಸಿದ ಹಣವನ್ನು ದುರುಪಯೋಗಪಡಿಸಿಕೊಂಡಿದೆ ಎಂದು ಎಫ್ಐಆರ್ನಲ್ಲಿ ತಿಳಿಸಿಲಾಗಿದೆ.