Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಗಾಂಧಿನಗರ : ತೀವ್ರ ಕುತೂಹಲ ಕೆರಳಿಸಿರುವ ಗುಜರಾತ್ ವಿಧಾನಸಭೆಗೆ ಇಂದು ಮೊದಲ ಹಂತದ ಮತದಾನ ನಡೆಯಲಿದೆ.
ಅಬ್ಬರದ ಪ್ರಚಾರದ ಬಳಿಕ ಇಂದು ಮೊದಲ ಹಂತದ ಮತದಾನ ನಡೆಯುತ್ತಿದ್ದು, 89 ಕ್ಷೇತ್ರಗಳಲ್ಲಿ 788 ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ.
ಚುನಾವಣಾ ಆಯೋಗ ಸಕಲ ಸಿದ್ಧತೆ ಮಾಡಿಕೊಂಡಿದ್ದು ಮೋದಿ ತವರು ರಾಜ್ಯದಲ್ಲಿ ಈ ಬಾರಿ ಯಾರು ಅಧಿಕಾರದ ಗದ್ದುಗೆ ಏರಲಿದ್ದಾರೆ ಎನ್ನುವ ಕುತೂಹಲ ಮೂಡಿದೆ.
ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ತವರು ರಾಜ್ಯ ಗುಜರಾತ್ನ 19 ಜಿಲ್ಲೆಗಳ 89 ಸ್ಥಾನಗಳಿಗೆ ಮತದಾನ ನಡೆಯಲಿದೆ.