ರಾಹುಲ್ ಗಾಂಧಿ ಅವರು ಎಐಸಿಸಿ ಅಧ್ಯಕ್ಷರಾದ ಬಳಿಕ ಪಕ್ಷದ ಮೊದಲ ಕಾರ್ಯಕಾರಣಿ ಸಭೆ ಇಂದು ನಡೆಯಲಿದೆ.
ಕಾರ್ಯಕಾರಣಿ ಸಭೆಯಲ್ಲಿ ಗುಜರಾತ್ ಹಾಗೂ ಹಿಮಾಚಲ ಪ್ರದೇಶದ ಚುನಾವಣಾ ಫಲಿತಾಂಶ, 2ಜಿ ಸ್ಪೆಕ್ಟ್ರಂ ಹಗರಣದ ತೀರ್ಪು ಹಾಗೂ ಮತ್ತಿತರ ವಿಷಯಗಳ ಬಗ್ಗೆ ಚರ್ಚೆ ನಡೆಯಲಿದೆ ಎನ್ನಲಾಗಿದೆ.
ರಾಹುಲ್ ಗಾಂಧಿ ಅವರು ಕಾಂಗ್ರೆಸ್ ಅಧ್ಯಕ್ಷರಾದ ಬಳಿಕ ನಡೆಯುತ್ತಿರುವ ಮೊದಲ ಕಾರ್ಯಕಾರಣಿ ಸಭೆಯಾಗಿರುವುದರಿಂದ ಸಭೆ ಮಹತ್ವ ಪಡೆದಿದೆ.
ರಾಹುಲ್ ಗಾಂಧಿ ಡಿಸೆಂಬರ್ 16ರಂದು ಅಧಿಕಾರ ಸ್ವೀಕರಿಸಿದ್ದಾರೆ. ಇಂದು ಬೆಳಗ್ಗೆ 10:30ಕ್ಕೆ ಕಾರ್ಯಕಾರಣಿ ಸಭೆ ಆರಂಭವಾಗಲಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.