Webdunia - Bharat's app for daily news and videos

Install App

ಕಲ್ಯಾಣಿಯಲ್ಲಿ ಮುಳುಗಿ ಐವರು ಸಾವು!

Webdunia
ಗುರುವಾರ, 6 ಏಪ್ರಿಲ್ 2023 (09:09 IST)
ಚೆನ್ನೈ : ಪಂಗುಣಿ ಆಚರಣೆಯ ಅಂಗವಾಗಿ ಕಲ್ಯಾಣಿಯಲ್ಲಿ ಸ್ನಾನಕ್ಕೆಂದು ತೆರಳಿದ ಐವರು ಪುರೋಹಿತರು ನೀರಿನಲ್ಲಿ ಮುಳುಗಿ ಸಾವನ್ನಪಿರುವ ಘಟನೆ ತಮಿಳುನಾಡಿನ ನಂಗನಲ್ಲೂರಿನ ಧರ್ಮಲಿಂಗೇಶ್ವರ ದೇವಸ್ಥಾನದ ಬಳಿ ನಡೆದಿದೆ.
 
ಮೃತಪಟ್ಟವರನ್ನು ಸೂರ್ಯ (24), ರಾಘವನ್ (22), ಯೋಗೇಶ್ವರನ್ (23), ರಾಘವನ್ (18) ಹಾಗೂ ವನೇಶ್ (20) ಎಂದು ಗುರುತಿಸಲಾಗಿದೆ. ಪಂಗುಣಿ ಆಚರಣೆಯ ಅಂಗವಾಗಿ ನಂಗನಲ್ಲೂರಿನ ಧರ್ಮಲಿಂಗೇಶ್ವರ ದೇವಾಸ್ಥಾನದ ಪುರೋಹಿತರು 10:30ರ ವೇಳೆಗೆ ಸ್ನಾನಕ್ಕೆಂದು ಮೂವರಸಂಪೇಟ್ ದೇವಸ್ಥಾನದ ಬಳಿಯಿದ್ದ ಕಲ್ಯಾಣಿಗೆ ತೆರಳಿದ್ದರು.

ಈ ವೇಳೆ ಒಬ್ಬರು ಕಾಲು ಜಾರಿ ಬಿದ್ದಿದ್ದಾರೆ. ಅವರನ್ನು ರಕ್ಷಿಸಲು ಹೋಗಿ ಇನ್ನುಳಿದವರು ಸಾವನ್ನಪ್ಪಿದ್ದಾರೆ. ಎಲ್ಲಾ ಶವಗಳನ್ನು ನೀರಿನಿಂದ ಹೊರತೆಗೆದಿದ್ದು, ಈ ಕುರಿತು ತನಿಖೆ ಕೈಗೊಂಡಿದ್ದೇವೆ ಎಂದು ಚೆನ್ನೈ ಪೊಲೀಸ್ ಕಮಿಷನರ್ ಶಂಕರ್ ಜಿವಾಲ್ ಹೇಳಿಕೆ ನೀಡಿದ್ದಾರೆ. 

ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಐವರೂ ಚೆನ್ನೈನ ಮೂರು ಬೇರೆ ಬೇರೆ ಸ್ಥಳಗಳಿಗೆ ಸೇರಿದವರಾಗಿದ್ದು, ಅಗ್ನಿಶಾಮಕ ಮತ್ತು ರಕ್ಷಣಾ ತಂಡಗಳು ಶೋಧ ಕಾರ್ಯವನ್ನು ಮುಂದುವರೆಸುತ್ತಿದೆ ಎಂದು ಅಗ್ನಿಶಾಮಕ ಹಾಗೂ ರಕ್ಷಣಾ ಸೇವೆಗಳ ಡಿಜಿಪಿ ಅಭಾಷ್ ಕುಮಾರ್ ತಿಳಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments