Publish Date: Wed, 03 Jan 2018 (10:52 IST)
Updated Date: Wed, 03 Jan 2018 (10:54 IST)
ನವದೆಹಲಿ: ಬಹುಕೋಟಿ ಮೇವು ಹಗರಣದಲ್ಲಿ ಆರೋಪಿಯಾಗಿರುವ ಬಿಹಾರ ಮಾಜಿ ಸಿಎಂ, ಆರ್ ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಗೆ ಶಿಕ್ಷೆ ಪ್ರಮಾಣ ಇಂದು ಪ್ರಕಟವಾಗಲಿದೆ.
ಡಿಸೆಂಬರ್ 23 ರಿಂದ ರಾಂಚಿಯ ಬಿರ್ಸಾ ಮುಂಡಾ ಜೈಲಿನಲ್ಲಿ ಲಾಲೂ ಶಿಕ್ಷೆ ಅನುಭವಿಸುತ್ತಿದ್ದಾರೆ. ಆದರೆ ಶಿಕ್ಷೆ ಪ್ರಮಾಣ ಎಷ್ಟು ಎಂದು ಪ್ರಕಟವಾಗಿರಲಿಲ್ಲ. ಅದು ಕೆಲವೇ ಕ್ಷಣಗಳಲ್ಲಿ ಪ್ರಕಟವಾಗಲಿದ್ದು, ಈಗಾಗಲೇ ಲಾಲೂ ವಿಶೇಷ ನ್ಯಾಯಾಲಯದ ಎದುರು ಹಾಜರಾಗಿದ್ದಾರೆ.
ಮೂರು ವರ್ಷ ಶಿಕ್ಷೆ ಪ್ರಕಟವಾಗುವ ನಿರೀಕ್ಷೆಯಿದೆ. ಲಾಲೂ ಆರೋಗ್ಯ ಸ್ಥಿತಿ ಗತಿ ಗಮನಿಸಿ ಕನಿಷ್ಠ ಪ್ರಮಾಣದ ಶಿಕ್ಷೆ ನೀಡುವಂತೆ ಮನವಿ ಮಾಡುವುದಾಗಿ ಅವರ ಪರ ವಕೀಲರು ಹೇಳಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ