ಬಹುಕೋಟಿ ಮೇವು ಹಗರಣದಲ್ಲಿ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್ ಯಾದವ್‌ಗೆ, ಸಿಬಿಐ ನಿಶೇಷ ಕೋರ್ಟ್ ಮೂರುವರೆ ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಿದ್ದಲ್ಲದೇ 5 ಲಕ್ಷ ರೂ.ದಂಡ ವಿಧಿಸಿದೆ.
ಹಗರಣದಲ್ಲಿ ಭಾಗಿಯಾಗಿದ್ದ ಏಳು ಆರೋಪಿಗಳಿಗೆ ಕೂಡಾ ಮೂರವರೆ ವರ್ಷ ಜೈಲು ಶಿಕ್ಷೆ ಮತ್ತು 5 ಲಕ್ಷ ರೂಪಾಯಿ ದಂಡ ವಿಧಿಸಿ ಕೋರ್ಟ್ ತೀರ್ಪು ನೀಡಿದೆ.
ಕಳೆದ ಡಿಸೆಂಬರ್ ತಿಂಗಳಿನಲ್ಲಿ ವಿಚಾರಣೆ ನಡೆಸಿದ ಸಿಬಿಐ ವಿಶೇಷ ನ್ಯಾಯಾಲಯ, ಲಾಲು ಸೇರಿದಂತೆ ಎಂಟು ಆರೋಪಿಗಳನ್ನು ದೋಷಿಗಳೆಂದು ತೀರ್ಪು ನೀಡಿತ್ತು. ಮಾಜಿ ಸಿಎಂ ಜಗನ್ನಾಥ್ ಮಿಶ್ರಾ ಅವರನ್ನು ಖುಲಾಸೆಗೊಳಿಸಿತ್ತು.
1990-96ರ ಅವಧಿಯಲ್ಲಿ ಮೇವು ಖರೀದಿಯಲ್ಲಿ ಅಂದಾಜು 900 ಕೋಟಿ ರೂಪಾಯಿಗಳ ಹಗರಣ ನಡೆದಿದೆ ಎಂದು ಆರೋಪಿಸಿ ಆರೋಪಿಗಳ ವಿರುದ್ಧ 6 ಪ್ರಕರಣಗಳನ್ನು ದಾಖಲಿಸಲಾಗಿತ್ತು. ಇದೀಗ ನೀಡಿದ ತೀರ್ಪು ಎರಡನೇ ಪ್ರಕರಣವಾಗಿದೆ.
ಪಶುಗಳಿಗೆ ಮೇವು ಮತ್ತು ಔಷಧಿ ಪೂರೈಸುವುದಾಗಿ ಆರೋಪಿಗಳು ಸರಕಾರಿ ಖಜಾನೆಯಿಂದ ಬಹುಕೋಟಿ ರೂಪಾಯಿಗಳನ್ನು ಕಾನೂನುಬಾಹಿರವಾಗಿ ತಿಂದು ತೇಗಿದ್ದರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.