ಪ್ರಧಾನಮಂತ್ರಿ ನರೇಂದ್ರ ಮೋದಿ ಸರಕಾರ ಎರಡು ವರ್ಷ ಪೂರೈಸಿದ ಸಂದರ್ಭದಲ್ಲಿ ನವದೆಹಲಿಯಲ್ಲಿ ಆಯೋಜಿಸಲಾಗಿದ್ದ ಒಂದೇ ದಿನದ ಕಾರ್ಯಕ್ರಮಕ್ಕೆ 36 ಕೋಟಿ ರೂ ವೆಚ್ಚ ಮಾಡಿರುವುದು ಬಹಿರಂಗವಾಗಿದೆ.
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಸರಕಾರ ಜಾಹೀರಾತಿಗಾಗಿ ದುಂದು ವೆಚ್ಚ ಮಾಡುತ್ತಿದೆ ಎಂದು ಆರೋಪಿಸಿದ್ದ ಬಿಜೆಪಿ ಇದೀಗ, ದುಂದುವೆಚ್ಚದ ಬಲೆಗೆ ಸಿಲುಕಿದೆ.
ಮೋದಿ ಸರ್ಕಾರ ಎರಡು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಆಯೋಜಿಸಿದ್ದ ಒಂದು ದಿನದ 'ಏಕ್ ನಯಿ ಸುಬಹ್' ಅದ್ಧೂರಿ ಕಾರ್ಯಕ್ರಮಕ್ಕಾಗಿ 36 ಕೋಟಿಗೂ ಅಧಿಕ ವೆಚ್ಚ ಮಾಡಿರುವುದು ಮಾಹಿತಿ ಹಕ್ಕು ಕಾಯ್ದೆಯಡಿ ಬಹಿರಂಗವಾಗಿದೆ.
ಮಾಹಿತಿ ಹಕ್ಕು ಕಾರ್ಯಕರ್ತರು ಸಲ್ಲಿಸಿದ ಅರ್ಜಿಗೆ ಉತ್ತರಿಸಿದ ಕೇಂದ್ರ ಸರಕಾರ, ದೆಹಲಿಯಲ್ಲಿ ಆಯೋಜಿಸಿದ್ದ ಒಂದೇ ಒಂದು ದಿನದ ಏಕ್ ನಯಿ ಸುಬಹ್ ಕಾರ್ಯಕ್ರಮಕ್ಕೆ 36 ಕೋಟಿಗೂ ಹೆಚ್ಚು ಹಣ ವೆಚ್ಚ ಮಾಡಲಾಗಿದೆ ಎಂದು ಮಾಹಿತಿ ಹಕ್ಕು ಕಾಯ್ದೆಯಡಿ ಬಹಿರಂಗಪಡಿಸಿದೆ.
ಕೇವಲ ಆರು ಗಂಟೆಗಳ ಒಂದು ಕಾರ್ಯಕ್ರಮದ ಪ್ರಚಾರಕ್ಕಾಗಿ ಮುದ್ರಣ ಮತ್ತು ವಿದ್ಯುನ್ಮಾನ ಮಾಧ್ಯಮಗಳಿಗೆ ರು.36,64,88,085 ಜಾಹೀರಾತು ನೀಡಲಾಗಿದೆ.
ಕೆಲವೇ ಕೆಲ ಗಂಟೆಗಳ ಜಾಹೀರಾತಿಗಾಗಿ ಖಾಸಗಿ ಚಾನೆಲ್‌ಗಳಿಗೆ, ಪತ್ರಿಕಾ ಮಾಧ್ಯಮಗಳಿಗೆ 36,64,88,085 ಕೋಟಿ ರೂಪಾಯಿಗಳ ಜಾಹೀರಾತು ನೀಡಲಾಗಿದೆ.
ಕೇಂದ್ರದಲ್ಲಿ ಮೋದಿ ನೇತೃತ್ವದ ಎನ್ ಡಿಎ ಸರ್ಕಾರ ಎರಡು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಮೇ 29ರಂದು ನವದೆಹಲಿಯಲ್ಲಿ ಬೃಹತ್ ಕಾರ್ಯಕ್ರಮ ಆಯೋಜಿಸಲಾಗಿತ್ತು. ಪ್ರಧಾನಿ ಮೋದಿ ಸೇರಿದಂತೆ ಗಣ್ಯಾತಿಗಣ್ಯರು ಕಾರ್ಯಕ್ರಮದಲ್ಲಿ ಹಾಜರಿದ್ದರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ