Publish Date: Wed, 04 Nov 2020 (09:34 IST)
Updated Date: Wed, 04 Nov 2020 (09:36 IST)
ನೊಯ್ಡಾ : ಗೆಳೆತಿಯ ಅಣ್ಣನನ್ನು ಕೊಲೆ ಮಾಡಿದ ಆರೋಪದ ಮೇಲೆ ಸುಮಾರು 1ಮಿಲಿಯನ್ ಅನುಯಾಯಿಗಳನ್ನು ಹೊಂದಿದ್ದ ಪ್ರಸಿದ್ಧ ಯೂಟ್ಯೂಬರ್ ನನ್ನು ಪೊಲೀಸರು ಬಂಧಿಸಿದ ಘಟನೆ ಉತ್ತರಪ್ರದೇಶದ ನೊಯ್ಡಾದಲ್ಲಿ ನಡೆದಿದೆ.
ನಿಜಾಮುಲ್ ಖಾನ್(24) ಬಂಧಿತ ಆರೋಪಿ. ಈತನ ಗೆಳತಿಯ ಅಣ್ಣ ತನ್ನ ತಂಗಿಯಿಂದ ದೂರವಿರುವಂತೆ ತಿಳಿಸಿ ಆತನನ್ನು ಥಳಿಸಿದ್ದಾನೆ. ಇದರಿಂದ ಕೋಪಗೊಂಡಿದ್ದ ಆರೋಪಿ ತನ್ನ ಇಬ್ಬರು ಸ್ನೇಹಿತರ ಜೊತೆ ಸೇರಿ ಗೆಳೆತಿಯ ಅಣ್ಣನಿಗೆ ಹಿಂಬದಿಗೆ ಗುಂಡು ಹಾರಿಸಿ ಕೊಲೆ ಮಾಡಿದ್ದಾರೆ. ರಸ್ತೆ ಬದಿಯಲ್ಲಿ ಸತ್ತು ಬಿದ್ದಿದ್ದವನನ್ನು ದಾರಿಹೋಕರು ಆಸ್ಪತ್ರೆಗೆ ದಾಖಲಿಸಿದರೂ ಆತ ಸಾವನಪ್ಪಿರುವುದು ತಿಳಿದುಬಂದಿದೆ.
ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮೂವರು ಆರೋಪಿಗಳನ್ನುಬಂಧಿಸಿದ್ದಾರೆ. ಜೊತೆಗೆ ಇದರಲ್ಲಿ ಮೃತನ ತಂಗಿಯ ಕೈವಾಡವಿದೆಯೇ ಎಂಬ ಬಗ್ಗೆ ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ.