ಶ್ರೀನಗರ : ಪ್ರತಿ ಮನೆಯಲ್ಲೂ ತ್ರಿವರ್ಣ ಧ್ವಜ ಹಾರಾಡಲೇಬೇಕೆಂಬ ಉದ್ದೇಶದಿಂದ ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿತ ಪ್ರದೇಶದಲ್ಲಿ ತ್ರಿವರ್ಣ ಧ್ವಜವನ್ನು ಕೊಂಡುಕೊಳ್ಳುವಂತೆ,
ಅಲ್ಲಿನ ಆಡಳಿತವೇ ಜನರನ್ನು ಒತ್ತಾಯಿಸುತ್ತಿದೆ ಎಂದು ಜಮ್ಮು ಕಾಶ್ಮೀರದ ಮಾಜಿ ಸಿಎಂ ಹಾಗೂ ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಆರೋಪಿಸಿದ್ದಾರೆ.
75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಕೇಂದ್ರ ಸರ್ಕಾರದಿಂದ ಹರ್ ಘರ್ ತಿರಂಗಾ ಅಭಿಯಾನ ಹಮ್ಮಿಕೊಳ್ಳಲಾಗಿದೆ.
ಅದಕ್ಕಾಗಿ ಆಗಸ್ಟ್ 13 ರಿಂದ ಆಗಸ್ಟ್ 15ರ ನಡುವೆ ದೇಶದ ನಾಗರಿಕರು ತಮ್ಮ ಮನೆಯಲ್ಲಿ ತ್ರಿವರ್ಣ ಧ್ವಜ ಹಾರಾಡುವಂತೆ ಪ್ರೇರೇಪಿಸುತ್ತಿದೆ. ಆದರೆ ಕಾಶ್ಮೀರ ಆಡಳಿತ ತ್ರಿವರ್ಣ ಧ್ವಜವನ್ನು ಕೊಂಡುಕೊಳ್ಳುವಂತೆ ಜನತೆಗೆ ಒತ್ತಾಯ ಮಾಡುತ್ತಿದೆ ಎಂದು ಹೇಳಿದ್ದಾರೆ.