Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಇಂದು ಮಾಜಿ ಉಪ ಪ್ರಧಾನಿ ಬಾಬು ಜಗಜೀವನ್ ರಾಮ್ ಜನ್ಮದಿನ: ನಮನ ಸಲ್ಲಿಸಿದ ಪ್ರಧಾನಿ ಮೋದಿ

Former Deputy Prime Minister Babu Jagjivan Ram's,

Sampriya

ನವದೆಹಲಿ , ಶುಕ್ರವಾರ, 5 ಏಪ್ರಿಲ್ 2024 (11:50 IST)
Photo Courtesy X
ನವದೆಹಲಿ:  ದಲಿತ ನಾಯಕ ಮಾಜಿ ಉಪ ಪ್ರಧಾನಿ ಬಾಬು ಜಗಜೀವನ್ ರಾಮ್ ಅವರ ಜನ್ಮದಿನಕ್ಕೆ ಅವರ ಸೇವೆಯನ್ನು ಸ್ಮರಿಸಿ ಪ್ರಧಾನಿ ನರೇಂದ್ರ ಮೋದಿ ಅವರು ಗೌರವ ಸಲ್ಲಿಸಿದ್ದಾರೆ.

ಎಕ್ಸ್‌ ಖಾತೆಯಲ್ಲಿ ಪ್ರಧಾನಿ ಮೋದಿ  ಅವರು, ಸಾಮಾಜಿಕ ಸೇವೆಗೆ ಅವರ ಸಮರ್ಪಣೆ ಮತ್ತು ಸಾಮಾಜಿಕ ನ್ಯಾಯಕ್ಕಾಗಿ ಅವರ ಬದ್ಧತೆಯು ದೇಶದ ಪ್ರತಿ ಪೀಳಿಗೆಗೆ ಸ್ಫೂರ್ತಿ ನೀಡುತ್ತದೆ ಎಂದು ಬರೆದುಕೊಂಡಿದ್ದಾರೆ. ಅದಲ್ಲದೆ ಹಿಂದಿನ ವಿಡಿಯೊ ಕ್ಲಿಪ್ ಅನ್ನು ಸಹ ಹಂಚಿಕೊಂಡಿದ್ದಾರೆ.

ಬಿಹಾರ ಮೂಲದ ಜಗಜೀವನ್ ರಾಮ್ 1977 ರಿಂದ 1979 ರವರೆಗೆ ಭಾರತದ ಉಪ ಪ್ರಧಾನ ಮಂತ್ರಿಯಾಗಿ ಸೇವೆ ಸಲ್ಲಿಸಿದ್ದರು. 1971ರ ಪಾಕಿಸ್ತಾನದ ವಿರುದ್ಧದ ಯುದ್ಧದ ಸಮಯದಲ್ಲಿ ಕೇಂದ್ರ ರಕ್ಷಣಾ ಸಚಿವರಾಗಿಯೂ ಕಾರ್ಯ ನಿರ್ವಹಿಸಿದ್ದರು.

ತುರ್ತು ಪರಿಸ್ಥಿತಿ ವಿರೋಧಿಸಿದ್ದ ಅವರು, ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿ ಬಳಿಕ ಜನತಾ ಪಕ್ಷದ ಮೈತ್ರಿಕೂಟಕ್ಕೆ ಸೇರಿಕೊಂಡರು.

Share this Story:

Follow Webdunia kannada

ಮುಂದಿನ ಸುದ್ದಿ

ಬೆಂಗಳೂರು ಗ್ರಾಮಾಂತರದಲ್ಲಿ ಮಂಜುನಾಥ್ ಹೆಸರಿನ ನಾಲ್ವರು, ಸುರೇಶ್ ಹೆಸರಿನ ಮೂವರು ಕಣಕ್ಕೆ