ಪಾಕಿಸ್ತಾನ : ಮಾಜಿ ಪ್ರಧಾನಿ ಇಮ್ರಾನ್ ಖಾನ್ ಗೆ ಸೈಫರ್ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ. ದೇಶದ ಗೌಪ್ಯತಾ ನೀತಿಯನ್ನು ಉಲ್ಲಂಘಿಸಿದ ಆರೋಪದ ಮೇಲೆ ಇಮ್ರಾನ್ ಖಾನ್ ಗೆ ನ್ಯಾಯಾಲಯ ಶಿಕ್ಷೆ ವಿಧಿಸಿದೆ. ಇಮ್ರಾನ್ ಖಾನ್ ಜೊತೆಗೆ ಮಾಜಿ ವಿದೇಶಾಂಗ ಸಚಿವ ಶಾಹ್ ಮೊಹಮ್ಮದ್ ಖುರೇಷಿಗೂ ಸಹ 10 ವರ್ಷ ಜೈಲು ಶಿಕ್ಷೆ ವಿಧಿಸಿದೆ.
ವಾಷಿಂಗ್ಟನ್ ನಿಂದ ರಾಜತಾಂತ್ರಿಕ ಅಧಿಕಾರಿಗಳ ಮೂಲಕ ಕಳಿಸಿಲಾಗಿದ್ದ ರಹಸ್ಯ ಸಂದೇಶವನ್ನು ಖುರೇಷಿ ಹಂಚಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ. ನ್ಯಾಯಾಧೀಶರಾದ ಅಬುಲ್ ಹಸ್ನತ್ ಮುಹಮ್ಮದ್ ಜುಲ್ಖರ್ ನೈನ್ ಅವರು ಮಂಗಳವಾರ ತೀರ್ಪು ಪ್ರಕಟಿಸಿದರು. ಈ ತೀರ್ಪನ್ನು ಪ್ರಶ್ನಿಸಿ ಇಮ್ರಾನ್ ಖಾನ್ ಹೈಕೋರ್ಟ್ ಮೆಟ್ಟಿಲೇರಲಿದ್ದಾರೆ ಎಂದು ತಿಳಿದು ಬಂದಿದೆ.