ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಮಾಡುವ ಎಲ್ಲಾ ಕೆಲಸಕ್ಕೂ ಜನರಿಂದ ಮೆಚ್ಚುಗೆಯ ಮಹಾಪೂರವೇ ಹರಿದುಬರುತ್ತದೆ. ಆದರೆ ಇದೀಗ ಪ್ರತಿಪಕ್ಷದ ನಾಯಕರೊಬ್ಬರು ಪ್ರಧಾನಿ ಮೋದಿಯವರ ಈ ಕೆಲಸಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಹೌದು. ನಿನ್ನೆ ಮೋದಿಯವರು ತಮಿಳುನಾಡಿನ ಮಹಾಬಲಪುರಂನಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಭೇಟಿಯಾಗಿ ಅನೌಪಚಾರಿಕ ಶೃಂಗಸಭೆ ನಡೆಸಿದ್ದರು. ಈ ವೇಳೆ ಪ್ರಧಾನಿ ಮೋದಿ ಅವರು ಮಹಾಬಲಪುರಂ ಬೀಚ್ ನಲ್ಲಿ ಬರೀ ಕಾಲಿನಲ್ಲಿ ವಾಕ್ ಮಾಡುತ್ತಿದ್ದಾಗ ಎಲ್ಲೆಂದರಲ್ಲಿ ಬಿದ್ದಿದ್ದ ಪ್ಲಾಸ್ಟಿಕ್ ಗಳನ್ನು ಹೆಕ್ಕಿದ್ದಾರೆ. ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.
ಪ್ರಧಾನಿ ಮೋದಿಯವರ ಈ ಕಾರ್ಯವನ್ನು ಮೆಚ್ಚಿದ ಜೆಡಿಎಸ್ ವರಿಷ್ಠ ದೇವೇಗೌಡರು, ‘ಪ್ಲಾಸ್ಟಿಕ್ ಮುಕ್ತ ಭಾರತದತ್ತ ದಾಪುಗಾಲಿಡಲು ಇದೊಂದು ಸ್ಪೂರ್ತಿದಾಯಕ ಪ್ರಾರಂಭ’ ಎಂದು ಟ್ವೀಟ್ ಮಾಡಿದ್ದಾರೆ.