ನವದೆಹಲಿ : ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದಮಾಜಿ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ (66) ಇಂದು ಕೊನೆಯುಸಿರೆಳೆದಿದ್ದಾರೆ.
ಅರುಣ್ ಜೇಟ್ಲಿ ಅವರು ಹಲವು ದಿನಗಳಿಂದ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದು, ಏಮ್ಸ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಮಧ್ಯಾಹ್ನ 12 ಗಂಟೆ 7 ನಿಮಿಷಕ್ಕೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
2014ರ ಮೋದಿ ಸರ್ಕಾರದಲ್ಲಿ ಅರುಣ್ ಜೇಟ್ಲಿ ಅತ್ಯಂತ ಪ್ರಮುಖ ನಾಯಕರಾಗಿದ್ದು, ವಿತ್ತ ಮತ್ತು ರಕ್ಷಣಾ ಇಲಾಖೆಯ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ಅಗಲಿದ ಹಿರಿಯ ನಾಯಕನಿಗೆ ರಾಜಕೀಯ ಗಣ್ಯರು ಸಂತಾಪ ಸೂಚಿಸಿದ್ದಾರೆ.