ನವದೆಹಲಿ : ಚುನಾವಣೆ ವೇಳೆ ರಾಜಕೀಯ ಪಕ್ಷಗಳು ಘೋಷಿಸುವ ಉಚಿತ ಕೊಡುಗೆಗಳ ವಿಚಾರ ಚರ್ಚೆ ಆಗುತ್ತಿರುವ ಸಂದರ್ಭದಲ್ಲೇ ರಾಜಕೀಯ ಪಕ್ಷಗಳಿಗೆ ಚುನಾವಣಾ ಆಯೋಗ ಬಿಗ್ ಶಾಕ್ ನೀಡಿದೆ.
ಚುನಾವಣಾ ಪ್ರಣಾಳಿಕೆಯಲ್ಲಿ ರಾಜಕೀಯ ಪಕ್ಷಗಳು ಮಾಡುವ ವಾಗ್ದಾನಗಳು, ಅವುಗಳ ಜಾರಿಗೆ ಅಗತ್ಯವಿರುವ ಆರ್ಥಿಕ ಸಂಪನ್ಮೂಲಗಳ ಕುರಿತಾಗಿ ಜನಕ್ಕೆ ಮೊದಲೇ ಮಾಹಿತಿ ನೀಡಬೇಕು ಎಂದು ಹೇಳಿದೆ.
ಈ ಮಾಹಿತಿ ಆಧಾರದಲ್ಲಿ ತಮಗೆ ಬೇಕಾದ ಅಭ್ಯರ್ಥಿಯನ್ನು ಆಯ್ಕೆ ಮಾಡಿಕೊಳ್ಳಲು ಮತದಾರರಿಗೆ ಅನುಕೂಲವಾಗಲಿದೆ ಎಂದು ಚುನಾವಣಾ ಆಯೋಗ ಅಭಿಪ್ರಾಯಪಟ್ಟಿದೆ.
ಈ ಪ್ರಸ್ತಾಪದ ಬಗ್ಗೆ ಅಕ್ಟೋಬರ್ 18 ರೊಳಗೆ ಅಭಿಪ್ರಾಯ ತಿಳಿಸಿ ಎಂದು ರಾಜಕೀಯ ಪಕ್ಷಗಳಿಗೆ ಸೂಚನೆ ನೀಡಿದೆ. ಇದಕ್ಕೆ ಬಿಜೆಪಿಯೇತರ ರಾಜಕೀಯ ಪಕ್ಷಗಳು ಗರಂ ಆಗಿದೆ.
ಶುರು ಮಾಡಿದಂತಿದೆ. ಚುನಾವಣಾ ಆಯೋಗ ತನ್ನ ಮಿತಿಯನ್ನು ಮೀರುತ್ತಿದೆ ಎಂದು ಶಿವಸೇನೆ ಕಿಡಿಕಾರಿದೆ.